SUDDIKSHANA KANNADA NEWS/ DAVANAGERE/ DATE-09-05-2025
ದಾವಣಗೆರೆ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ಸಿಗಲಿ ಮತ್ತು ಯೋಧರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅನುಗ್ರಹಿಸಿ ತಾಯಿ ಎಂದು ಪ್ರಾರ್ಥಿಸಿ ಮೇ. 10ರಂದು ನಗರದ ದುರ್ಗಾಂಬಿಕಾ ದೇವಸ್ಥಾನದಲ್ಲಿ ಜಿಲ್ಲಾ ಜವಾಹರ್ ಬಾಲ್ ಮಂಚ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು.
ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಜವಾಹರ್ ಬಾಲ್ ಮಂಚ್ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅಲ್ಲೇ ಸಮೀಪದಲ್ಲಿರುವ ಕಡಕ್ ಶಾ ವಲಿ ದರ್ಗಾದಲ್ಲಿಯೂ ವಿಶೇಷ ಪ್ರಾರ್ಥನೆ ಸಲ್ಲಿಸುವುದಾಗಿ ಜಿಲ್ಲಾ ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.