ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

800 ಕನ್ನಡ ಮತ್ತು 100 ಉರ್ದುಶಾಲೆಗಳು ಕೆಪಿಎಸ್ ಶಾಲೆಗಳಾಗಿ ಅಭಿವೃದ್ಧಿ ಜೊತೆಗೆ ಮದರಸಾಗಳಲ್ಲಿ ಕನ್ನಡ ಕಲಿಕೆಗೆ ಆದ್ಯತೆ: ಸಿದ್ದರಾಮಯ್ಯ ಘೋಷಣೆ!

On: November 1, 2025 1:10 PM
Follow Us:
ಸಿದ್ದರಾಮಯ್ಯ
---Advertisement---

SUDDIKSHANA KANNADA NEWS/DAVANAGERE/DATE:01_11_2025

ಬೆಂಗಳೂರು: ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

READ ALSO THIS STORY: ಬಂಗಾರದ ಆಭರಣವಿದ್ದ ಬ್ಯಾಗ್ ಸುಲಿಗೆ: ಕೆಲವೇ ಗಂಟೆಯಲ್ಲೇ ಆರೋಪಿ ಅಂದರ್!

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದರು.

ಇದರ ಜೊತೆಗೆ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದರು.

ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಕರ್ನಾಟಕ

ನೀತಿ ಆಯೋಗ 2025 ವರದಿ: ಐಟಿ, ಹಣಕಾಸು, ಆತಿಥ್ಯ ಮತ್ತು ರಿಯಲ್ ಎಸ್ಟೇಟ್ ಸೇರಿ ಸೇವಾ ಕ್ಷೇತ್ರಗಳಲ್ಲಿ ದೇಶದಲ್ಲೇ ಕರ್ನಾಟಕ ಫಸ್ಟ್!

ಸಿದ್ದರಾಮಯ್ಯ

18000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಉದ್ಯೋಗದ ಬಗ್ಗೆ ಮಹತ್ವದ ಮಾಹಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ದ್ರೋಹದಿಂದ 1 ಲಕ್ಷ ಕೋಟಿ ರೂ. ಕರ್ನಾಟಕಕ್ಕೆ ನಷ್ಟ: ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

ಸಿದ್ದರಾಮಯ್ಯ

ಎಐನಿಂದ ಉದ್ಯೋಗ ನಷ್ಟವಾಗದಂತೆ ಕನ್ನಡ ಭಾಷೆ ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯೋತ್ಸವ

ರಾಜ್ಯ, ಜಿಲ್ಲಾಡಳಿತದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಛಾಯಾಗ್ರಾಹಕರ ಕಡೆಗಣನೆ: ಮನು ಎಂ. ದೇವಗಿರಿ ಆರೋಪ!

ನೇಮಕಾತಿ

ನ.13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಅಗ್ನಿವೀರ್ ನೇಮಕಾತಿ ರ‍್ಯಾಲಿ

Leave a Comment