Home ದಾವಣಗೆರೆ “RSS ಸ್ವಾತಂತ್ರ್ಯ ಹೋರಾಟದಲ್ಲಿದ್ದವರ 50 ಹೆಸರು ನೀಡಲಿ”, ನಾನು 500 ಹೆಸರು ಹೇಳುತ್ತೇನೆ: ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

“RSS ಸ್ವಾತಂತ್ರ್ಯ ಹೋರಾಟದಲ್ಲಿದ್ದವರ 50 ಹೆಸರು ನೀಡಲಿ”, ನಾನು 500 ಹೆಸರು ಹೇಳುತ್ತೇನೆ: ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು!

Share
RSS
Share

ಬೆಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್ (RSS) ಪಾತ್ರವೇನು ಎಂಬುವುದನ್ನು ಸ್ಪಷ್ಟಪಡಿಸಲಿ ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತ್ಯಾಗ ಮಾಡಿದ 500 ಕಾಂಗ್ರೆಸ್ ನಾಯಕರ ಪಟ್ಟಿಯನ್ನು ನೀಡಲು ತಾವು ಸಿದ್ಧರಿದ್ದು, ಆರ್‌ಎಸ್‌ಎಸ್ ಕನಿಷ್ಠ 50 ಜನರ ಪಟ್ಟಿಯನ್ನಾದರೂ ಬಿಡುಗಡೆ ಮಾಡಲಿ ಎಂದು ಅವರು ಸವಾಲು ಹಾಕಿದ್ದಾರೆ.

ವಿಭಜನೆಯ ನಂತರ ನಡೆದ ಕೋಮು ಗಲಭೆಗಳಲ್ಲಿ ಆರ್‌ಎಸ್‌ಎಸ್ ಪಾತ್ರವನ್ನು ಪ್ರಶ್ನಿಸಿದ ಖರ್ಗೆ, ಸಂಘಟನೆಯು ಸಮಾಜದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಲು ಕಾರಣವಾಗಿದೆ ಎಂದು ಆರೋಪಿಸಿದರು. ಇದೇ ವೇಳೆ RSS ಬ್ಯಾನ್ ಮಾಡುವ ವಿಚಾರವಾಗಿ ಮಾತನಾಡಿದ ಅವರು, “ಆರ್‌ಎಸ್‌ಎಸ್ ಯಾವುದೇ ಅಧಿಕೃತ ನೋಂದಣಿ ಹೊಂದಿಲ್ಲದಿರುವುದರಿಂದ ಅದನ್ನು ಕಾನೂನಾತ್ಮಕವಾಗಿ ನಿಷೇಧಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಸರ್ಕಾರಿ ಜಾಗ ಮತ್ತು ಸಾರ್ವಜನಿಕ ಆಸ್ತಿಗಳಲ್ಲಿ ಆರ್‌ಎಸ್‌ಎಸ್ ಶಾಖೆಗಳು ಹಾಗೂ ಚಟುವಟಿಕೆಗಳನ್ನು ನಿಯಂತ್ರಿಸುವ ಕರ್ನಾಟಕ ಸರ್ಕಾರದ ಹೊಸ ವಿಧೇಯಕದ ಬೆನ್ನಲ್ಲೇ ಈ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles