Home ಕ್ರೈಂ ನ್ಯೂಸ್ ಕನ್ನಡಿಗರ ಅಪಮಾನಿಸುವುದನ್ನ ಮುಂದುವರಿಸಿದ ಬಿಜೆಪಿ, ರಾಜ್ಯಪಾಲರು: ಪ್ರಿಯಾಂಕ್ ಖರ್ಗೆ ಆಕ್ರೋಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಕನ್ನಡಿಗರ ಅಪಮಾನಿಸುವುದನ್ನ ಮುಂದುವರಿಸಿದ ಬಿಜೆಪಿ, ರಾಜ್ಯಪಾಲರು: ಪ್ರಿಯಾಂಕ್ ಖರ್ಗೆ ಆಕ್ರೋಶ

Share
Share

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಮತ್ತು ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ, ಶೋಷಿಸಿದ್ದ ಬಿಜೆಪಿ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರಗೀತೆ ನುಡಿಸುವವರೆಗೂ ಕಾಯದೆ ಎದ್ದು ಹೊರಟ ರಾಜ್ಯಪಾಲರು ಶಿಷ್ಟಾಚಾರವನ್ನು ಬದಿಗೊತ್ತಿ ರಾಷ್ಟ್ರಗೀತೆಗೂ ಅವಮಾನಿಸಿದ್ದಾರೆ. ಈ ಮೂಲಕ ಬಿಜೆಪಿ ರಾಷ್ಟ್ರ ಗೀತೆಯ ವಿರೋಧಿ, ಸಂವಿಧಾನ ವಿರೋಧಿ, ಕನ್ನಡಿಗರ ವಿರೋಧಿ ಎನ್ನುವುದು ಜಗಜ್ಜಾಹೀರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರನ್ನು ಉದ್ದೇಶಿಸಿ ಪೂರ್ಣ ಭಾಷಣ ಮಾಡದಷ್ಟು ತೀವ್ರ ಅಸಹನೆಯನ್ನು ತೋರಿರುವ ರಾಜ್ಯಪಾಲರು ಬಿಜೆಪಿಯ ದರ್ಪ, ದಾರ್ಷ್ಟ್ಯದ ವಕ್ತಾರರಾಗಿ ನಿರೂಪಿಸಿದ್ದಾರೆ. ಅಸಡ್ಡೆಯಿಂದ ಕೂಡಿದ ನಾಲ್ಕು ಸಾಲಿನ ಮಾತು, ಸರ್ಕಾರದ ಭಾಷಣದ ತಿರಸ್ಕಾರವು ಸಂವಿಧಾನದ ಆಶಯಗಳ ಉಲ್ಲಂಘನೆ ಮಾತ್ರವಲ್ಲ, ಕನ್ನಡಿಗರಿಗೆ ಎಸಗಿದ ಘೋರ ಅವಮಾನ. ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ನೆಲಕ್ಕೆ ಹಾಕಿ ಹೊಸಕುತ್ತಿರುವ ಬಿಜೆಪಿಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

Share

Leave a comment

Leave a Reply

Your email address will not be published. Required fields are marked *