Site icon Kannada News-suddikshana

ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ, ರೆಡ್ ಕಾರ್ಪೆಟ್ ಹಾಸಿ ಪಾನೀಯ ವ್ಯವಸ್ಥೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು!

ಕಲಬುರಗಿ: ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ನಾಯಕರು ತೊಡೆ ತಟ್ಟಿದ್ದಾರೆ. ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಯವರ ಆಪ್ತರ ಕೈವಾಡ ಇದೆ, ಇದರಲ್ಲಿ ಪರೋಕ್ಷವಾಗಿ ಪ್ರಿಯಾಂಕ್ ಕೈವಾಡ ಇದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು ಇದೀಗ ಆವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.

ಬೀದರ್ ಮೂಲದ ಕಾಂಟ್ರಾಕ್ಟರ್ ಸಚಿನ್ ಪಂಚಾಳ್ ಸುಸೈಡ್ ಪ್ರಕರಣದಲ್ಲಿ ಸಚಿವ ಪ್ರೀಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಕಲಬುರಗಿಯ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ಮುತ್ತಿಗೆ, ಹಾಗೂ ಪ್ರತಿಭಟನೆ ನಡೆಸಲು ಸಜ್ಜಾಗಿದೆ.

ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯವರು ನನ್ನ ಮನೆಗೆ ಮುತ್ತಿಗೆ ಹಾಕಲಿ.. ನಾನೇ ಚಹಾ ಪಾನಿಯ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು. ಅದರಂತೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆಯಂತೆ ಪ್ರತಿಭಟನಾಕಾರರಿಗೆ ಚಹಾ, ಮಜ್ಜಿಗೆ, ಎಳೆ ನೀರಿನ ವ್ಯವಸ್ಥೆ ಮಾಡಿದ್ದಾರೆ.

ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಇಂದು ಬಿಜೆಪಿ ನಾಯಕರ ದಂಡು ಕಲಬುರಗಿಗೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಿ.ಟಿ ರವಿ ಸೇರಿ ಬಿಜೆಪಿ ನಾಯಕರ ದಂಡೇ ಕಲಬುರಗಿಯತ್ತ ತೆರಳಿದೆ.

Exit mobile version