SUDDIKSHANA KANNADA NEWS/DAVANAGERE/DATE:21_10_2025
ಬೆಂಗಳೂರು: ಬಿಜೆಪಿ ಹೈಕಮಾಂಡಿಗೆ ರೂ. 1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿ. ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.
READ ALSO THIS STORY: ದೀಪಾವಳಿ ಹಬ್ಬದ ವೇಳೆ ನಿಷೇಧಿತ, ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಹಚ್ಚಬೇಡಿ: ಪೊಲೀಸ್ ಇಲಾಖೆ ಸೂಚನೆ
ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ನಡುವಿನ ಸಂಭಾಷಣೆಯ ಹಳೆಯ ವಿಡಿಯೋ ಹಂಚಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ ಎಂದು ಟಾಂಗ್ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು, ಕಾಂಗ್ರೆಸ್ಸಿನದ್ದಲ್ಲ
ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.