• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

4 ಹಂತದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರಾದವರಿಗೆ ಪ್ರಶಸ್ತಿಯೊಂದಿಗೆ ಸಿಗುತ್ತೆ ನಗದು ಬಹುಮಾನ

Editor by Editor
August 21, 2024
in ದಾವಣಗೆರೆ
0
4 ಹಂತದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರಾದವರಿಗೆ ಪ್ರಶಸ್ತಿಯೊಂದಿಗೆ ಸಿಗುತ್ತೆ ನಗದು ಬಹುಮಾನ

SUDDIKSHANA KANNADA NEWS/ DAVANAGERE/ DATE:21-08-2024

ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬರುವ ಅಕ್ಟೋಬರ್ 2 ರಂದು ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ, ಪದವಿ-ಸ್ನಾತಕೋತ್ತರ ಪದವಿ ಸೇರಿ ಈ ಮೂರು ಹಂತದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿದೆ. ಮೂರು ವಿಭಾಗಕ್ಕೆ ಪ್ರತ್ಯೇಕವಾಗಿ ಜಿಲ್ಲಾ ಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು. ಈ ಪ್ರಬಂಧಗಳನ್ನು ರಾಜ್ಯ ಮಟ್ಟಕ್ಕೆ ಕಳುಹಿಸಿಕೊಡಲಿದ್ದು ಇಲ್ಲಿ ಆಯ್ಕೆಯಾದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಯಾಗಿ ವಿಜೇತರಿಗೆ ಪ್ರಥಮ 31 ಸಾವಿರ ರೂ. ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

ಪ್ರಬಂಧ ಸ್ಪರ್ಧೆ ವಿಭಾಗ ಮತ್ತು ವಿಷಯ; ಪ್ರೌಢ ಶಾಲಾ ವಿಭಾಗ : 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು
900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ :-* 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

*ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ :-* 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

*ನಿಬಂಧನೆಗಳು : ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ, ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ, ಆಧಾರ ಗ್ರಂಥಗಳು, ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಿದ್ದು ಆಯಾ ವಿಭಾಗದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ವಿವರ ಸಂಗ್ರಹಿಸಿಕೊಂಡು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ವಿಭಾಗದ ಉಪನಿರ್ದೇಶಕರ ಕಚೇರಿಗೆ ಮತ್ತು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಪ್ರಬಂಧ ಬರೆಯುವ ವಿದ್ಯಾರ್ಥಿಗಳ ಪಟ್ಟಿಯನ್ನು ಆಗಸ್ಟ್ 30 ರೊಳಗಾಗಿ ನೀಡಲು ಮತ್ತು ಹೆಚ್ಚಿನ ಮಾಹಿತಿಗಾಗಿ 08192-254892 ದೂರವಾಣಿಗೆ ಕರೆ ಮಾಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ತಿಳಿಸಿದ್ದಾರೆ.

Next Post
ತ್ರಿಬಲ್ ರೈಡಿಂಗ್, ವ್ಹೀಲಿಂಗ್ ಮಾಡ್ತೀರಾ… ಹಾಗಾದ್ರೆ ನಿಮಗೆ ಬೀಳುತ್ತೆ ದಂಡ…!

ತ್ರಿಬಲ್ ರೈಡಿಂಗ್, ವ್ಹೀಲಿಂಗ್ ಮಾಡ್ತೀರಾ... ಹಾಗಾದ್ರೆ ನಿಮಗೆ ಬೀಳುತ್ತೆ ದಂಡ...!

Leave a Reply Cancel reply

Your email address will not be published. Required fields are marked *

Recent Posts

  • ಮನೆಯ ವಾಸ್ತು ಶಾಸ್ತ್ರದ ನಿರ್ಮಾಣದ ಮಾಹಿತಿ
  • ನಿಮ್ಮ ಜಾತಕದಲ್ಲಿ ಯಾವ ದಶಾಭುಕ್ತಿ ಇದ್ದರೆ ಒಳ್ಳೆಯದು!
  • ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 39.7 ಅಡಿ ಅಷ್ಟೇ ಬೇಕು!
  • ಏಕದಿನ ನಿವೃತ್ತಿಯ ನಂತರ ಫಾರ್ಮ್ ಗೆ ಮರಳಿದ ಮ್ಯಾಕ್ಸ್‌ವೆಲ್: ವಾಷಿಂಗ್ಟನ್ ಫ್ರೀಡಂಗೆ ಭಾರೀ ಗೆಲುವು
  • ಇಸ್ರೇಲ್ – ಇರಾನ್ ಸಂಘರ್ಷ: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ನಷ್ಟ ಎದುರಿಸುವ ಭಯದಲ್ಲಿ ರಷ್ಯಾ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In