SUDDIKSHANA KANNADA NEWS/ DAVANAGERE/ DATE:16-03-2024
ದಾವಣಗೆರೆ: ನಗರದ ಶಕ್ತಿ ದೇವತೆ ದುರ್ಗಾಂಬಿಕಾ ದೇವಿ ಹಾಗೂ ವಿನೋಬನಗರದ ಚೌಡೇಶ್ವರಿ ದೇವಿ ಜಾತ್ರೆ ವೇಳೆ ಪ್ರಾಣಿ ಬಲಿ ನಿಷೇಧಿಸಲಾಗಿದೆ.
ಸಾರ್ವಜನಿಕ ಹಿತದೃಷ್ಟಿಯಿಂದಾಗಿ, ಪರಿಸರ ನೈರ್ಮಲ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾ.17 ರಿಂದ 20 ರವರೆಗೆ ನೆಡೆಯುವ ದಾವಣಗೆರೆ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ
ಹಾಗೂ ವಿನೋಬನಗರ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದಕ್ಕೆ ನಿರ್ಬಂಧ ಹೇರಲಾಗಿದೆ.
ಇತರೆ ಪ್ರಾಣಿಗಳನ್ನು ತೆಗೆದುಕೊಂಡು ಬರುವುದು, ಮಾರಕಾಸ್ತ್ರಗಳನ್ನು ತರುವುದು ಹಾಗೂ ಇತರೆ ಅನಾಗರಿಕ ಪದ್ಧತಿಗಳನ್ನು ಮಾಡುವ ಆಚರಣೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ
ದಂಡಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ತಿಳಿಸಿದ್ದಾರೆ.