ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದೆಹಲಿ ಪೊಲೀಸರ ದೌರ್ಜನ್ಯ ವಿರೋಧಿಸಿ ದಾವಣಗೆರೆಯಲ್ಲಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

On: August 17, 2023 12:34 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-08-2023

ದಾವಣಗೆರೆ: ದೆಹಲಿಯಲ್ಲಿ ಹಳೆಯ ಇಪಿಎಸ್ 95 ಪಿಂಚಣಿದಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಇಪಿಎಸ್ ನಾಯಕರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ವಿರೋಧಿಸಿ ನಗರದ ಕೆ.ಬಿ. ಬಡಾವಣೆಯಲ್ಲಿನ ಕಾರ್ಮಿಕ ಮಂತ್ರಾಲಯದ ಅಡಿಯಲ್ಲಿ ಬರುವ ನೌಕರರ ಭವಿಷ್ಯ ನಿಧಿ ಸಂಸ್ಥೆಯ ದಾವಣಗೆರೆ ಜಿಲ್ಲಾ ಕಚೇರಿ ಎದುರು ಇಪಿಎಸ್ 95 ರಾಷ್ಟ್ರೀಯ ಆಂದೋಲನ ಸಮಿತಿ ಪ್ರತಿಭಟನೆ ನಡೆಸಿತು. ಬಳಿಕ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ಸಮಿತಿಯ ಅಧ್ಯಕ್ಷ ಕೆ.ಎಂ. ಮರುಳಸಿದಯ್ಯ, ದೇಶದ ಕೈಗಾರಿಕಾ, ಸಾರ್ವಜನಿಕ, ಸಹಕಾರಿ ಖಾಸಗಿ ವಲಯದಲ್ಲಿ ಸೇವೆ ಸಲ್ಲಿಸಿದ 70 ಲಕ್ಷ ನಿವೃತ್ತ ನೌಕರರು ಅಂದರೆ ಇಪಿಎಸ್ 95 ಪಿಂಚಣಿದಾರರು ಅತಿಅಲ್ಪ ಮೊತ್ತದ ಪಿಂಚಣಿ ಪಡೆಯುತ್ತಿದ್ದು, ನಮ್ಮ ಬೆವರಿನ ಹನಿಯ ಹಣವನ್ನು ಕೊಡಲು ಭವಿಷ್ಯ ನಿಧಿ ಕಚೇರಿಯ ಅಧಿಕಾರಿಗಳು ನಮಗೆ ಸೇರ ಬೇಕಾದ ಪಿಂಚಣಿ ನೀಡುತ್ತಿಲ್ಲ ಎಂದು ಹೇಳಿದರು.

ಅತ್ಯಂತ ಹೀನ ಸ್ಥಿತಿಯಲ್ಲಿ ಪಿಂಚಿಣಿದಾರರು ಜೀವನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಿಂಚಿಣಿದಾರರ ಬೇಡಿಕೆಗಳನ್ನು ಈಡೇರಿಸಲು ಅಗ್ರಹಿಸಿ ದೆಹಲಿಯಲ್ಲಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಲ್ಲಿನ ಪೊಲೀಸರು ಅಮಾನುಷವಾಗಿ ವರ್ತಿಸಿ, ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿವೃತ್ತ ಸೇನಾಧಿಕಾರಿ, ಹಿರಿಯ ನಾಗರಿಕರಾದ ಅಶೋಕ ರಾವುತ್ ಅವರನ್ನು ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಆ ಮೂಲಕ ಸಂವಿಧಾನದ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ದೆಹಲಿ ಘಟನೆ ಖಂಡಿಸಿ, ನಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.

ಇಪಿಎಸ್ ಪಿಂಚಣಿ ಪಡೆಯುವ ನೌಕರರಿಗೆ ಕನಿಷ್ಠ 7,500 ಪಿಂಚಣಿ, ತುಟ್ಟಿಭತ್ಯೆ, ವೈದ್ಯಕೀಯ ಚಿಕಿತ್ಸೆಯ ವೆಚ್ಚ, ಪೂರ್ಣ ಪ್ರಮಾಣದ ಪಿಂಚಣಿ ಜೊತೆ ಇತರೆ ಸವಲತ್ತುಗಳನ್ನು ನೀಡಬೇಕು. ಇಪಿಎಫ್ ಅಧಿಕಾರಿಗಳ ನಕಾರಾತ್ಮಕ ಪ್ರತಿಕ್ರಿಯೆಯಿಂದಾಗಿ ಇಪಿಎಸ್ 95 ಪಿಂಚಣಿದಾರರ ಬೇಡಿಕೆಗಳು ಈಡೇರುತ್ತಿಲ್ಲ. ಈ ಕುರಿತು ದೇಶದ ಪ್ರಧಾನ ಮಂತ್ರಿ, ಕಾರ್ಮಿಕ ಮಂತ್ರಾಲಯ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಅಧಿಕಾರಿಗಳು ಗಮನ ಹರಿಸಬೇಕೆಂದು
ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಸಮಿತಿಯ ಟಿ.ಮಂಜುನಾಥ್, ಗಂಗಾಧರ, ಮಲ್ಲಿಕಾರ್ಜುನ ತಂಗಡಗಿ, ಕೆ.ವಿರೂಪಾಕ್ಷಪ್ಪ, ದತ್ತಪ್ಪ ಶೆಟ್ಟರ್, ಎಂ.ಬಿ.ಸಿದ್ದಲಿಂಗಯ್ಯ, ಪಿ.ನಿಜಗುಣ, ಚಂದ್ರಪ್ಪ, ಸೋಮಶೇಖರ್, ಎಂ.ಬಸವರಾಜ್, ಮಹೇಶ್ವರಪ್ಪ, ಪ್ರಭಾಕರ್, ಮಂಜುನಾಥ್ ಸೂಡಂಬಿ ಇತರರು ಇದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment