• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, May 22, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಕಾರ್ಪೊರೇಟ್ ಪರ, ರೈತ ವಿರೋಧಿ ಕೃಷಿ ನೀತಿ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

Editor by Editor
November 19, 2024
in ದಾವಣಗೆರೆ
0
ಕಾರ್ಪೊರೇಟ್ ಪರ, ರೈತ ವಿರೋಧಿ ಕೃಷಿ ನೀತಿ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

SUDDIKSHANA KANNADA NEWS/ DAVANAGERE/ DATE:19-11-2024

ದಾವಣಗೆರೆ: ಕಾರ್ಪೊರೇಟ್ ಪರ ಹಾಗೂ ರೈತ ವಿರೋಧಿ ಕೃಷಿ ನೀತಿ ಕೈಬಿಡಬೇಕು ಎಂದು ಒತ್ತಾಯಿಸಿ ಎಐಕೆಕೆಎಂಎಸ್ ಸಂಘಟನೆಯು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ತೆರಳಿ ಮನವಿ ಸಲ್ಲಿಸಿತು.

ರಾಜ್ಯದ ಎಲ್ಲಾ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಲು ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳಿ. ಈ ಕಾರಣಕ್ಕಾಗಿ ರೈತರ ಮೇಲೆ ಅನಾವಶ್ಯಕ ಕೇಸ್‌ಗಳನ್ನು ಹಿಂಪಡೆಯಿರಿ. ಅರಣ್ಯ ಇಲಾಖೆಯ ಕಿರುಕುಳವನ್ನು
ತಪ್ಪಿಸಬೇಕು. ರಾಜ್ಯದಲ್ಲಿ ಜಾರಿಗೆ ತರಲಾದ ಕರಾಳ ಕೃಷಿ ಕಾನೂನುಗಳಾದ ವಿದ್ಯುತ್ ಮಸೂದೆ, ಎಪಿಎಂಸಿ ಮಸೂದೆ, ಭೂ ಸುಧಾರಣೆ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಅವಶ್ಯಕ ವಸ್ತುಗಳ ಸಂಪೂರ್ಣ ಸರ್ಕಾರಿ ವ್ಯಾಪಾರವನ್ನು ಜಾರಿಗೊಳಿಸಬೇಕು. ಮತ್ತು ಕನಿಷ್ಟ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸಬೇಕು. ಹಾಗೂ ಸಿ2+50% ಸೂತ್ರದಡಿ ನಿಗದಿಯಾದ ಬೆಲೆಗೆ ರೈತರ ಬೆಳೆದ ಕೃಷಿ ಉತ್ಪನ್ನಗಳ
ಖರೀದಿಯನ್ನು ಖಚಿತಪಡಿಸಬೇಕು. ಕೃಷಿ ಕಾರ್ಮಿಕರಿಗೆ ವರ್ಷ ಪೂರ್ತಿ ಉದ್ಯೋಗ ಮತ್ತು ಸಮರ್ಪಕ ವೇತನವನ್ನು ಕೊಡಬೇಕು. ವಿದ್ಯುತ್‌ಕಾಯ್ದೆ 2023 ಅನ್ನು ವಾಪಸ್ ತೆಗೆದುಕೊಳ್ಳಬೇಕು. ರೈತರ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಹಾಕುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರೈತರ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಅರವತ್ತು ವರ್ಷಗಳನ್ನು ದಾಟಿದ ರೈತರಿಗೆ (ಮಾಸಿಕ ರೂ.10,000 ದಂತೆ) ಪಿಂಚಣಿಯನ್ನು ಕೊಡಬೇಕು. ಜಿಲ್ಲೆಯಲ್ಲಿ ಅತೀ ಹೆಚ್ಚು ಮೆಕ್ಕೆಜೋಳ ಮತ್ತು ಭತ್ತ ಬೆಳೆಗಳನ್ನು ಬೆಳೆಯುತ್ತಿದ್ದು, ಕೂಡಲೇ
ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಯೋಗ್ಯ ಬೆಂಬಲ ಬೆಲೆಯನ್ನು ಘೋಷಿಸಿ ರೈತರಿಗೆ ದಾಸ್ತಾನು ಮಾಡಿಕೊಳ್ಳಲು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಬೇಕು. ತೆಂಗು ಬೆಳೆಗಾರರಿಗೆ ಅನ್ಯಾಯವಾಗದಂತೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಿ ಸಂಸ್ಕರಣೆ
ಮತ್ತು ನಿರ್ವಹಣೆಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಮುಂಗಾರು ಮಳೆಯಿಂದ ಆಗಿರುವ ಬೆಳೆ ಹಾನಿಗೆ ಕೂಡಲೇ ಸೂಕ್ತ ಪರಿಹಾರವನ್ನು ಘೋಷಿಸಿ ಬೆಳೆ ನಷ್ಟ ಆಗಿರುವ ಜಿಲ್ಲೆಯ ಎಲ್ಲಾ ರೈತರಿಗೆ ಪರಿಹಾರ ದೊರಕಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಅನ್ನದಾತ’ರ ಯೋಗಕ್ಷೇಮವನ್ನು ಸರಿಯಾಗಿ ನೋಡಿಕೊಳ್ಳುವುದು ಪ್ರತಿಯೊಂದು ನಾಗರಿಕ ಸಮಾಜದ ಆದ್ಯ ಕರ್ತವ್ಯ. ಆದರೆ ಇಲ್ಲಿಯವರೆಗೆ ಆಳಿರುವ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಮೂಲಭೂತ ಜವಾಬ್ದಾರಿಯನ್ನು ನಿರಾಕರಿಸುತ್ತಾ ಬಂದಿರುವುದು ದುರಂತದ ವಿಷಯವಾಗಿದೆ. ಇಡೀ ದೇಶದಾದ್ಯಂತ ಇಂದು ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ಅತ್ಯಂತ ಸಂಕಟಮಯ ಜೀವನ ನಡೆಸುತ್ತಿದ್ದಾರೆ. ಸಾಲದ ಹೊರೆಯಿಂದಾಗಿ ಇಂದು ಸಾವಿರಾರು ರೈತರು ಆತ್ಮಹತ್ಯೆಗೆ ಮೊರೆ ಹೋಗುತ್ತಿದ್ದಾರೆ. ಪ್ರತಿದಿನವೂ ಬೀಜ, ಗೊಬ್ಬರ, ಕೀಟನಾಶಕಗಳಂತಹ ಕೃಷಿ ಒಳಸುರಿಗಳ ಬೆಲೆಗಳು ಗಗನಕ್ಕೇರುತ್ತಿವೆ. ಆದರೆ ಯಾವ ಸರ್ಕಾರಗಳೂ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ದೊರಕುವಂತೆ ಕ್ರಮಗಳನ್ನು ತೆಗೆದುಕೊಳ್ಳದಿರುವುದು ವಿಷಾದದ ಸಂಗತಿಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಮಧು ತೊಗಲೇರಿ, ಜಿಲ್ಲಾ ಕಾರ್ಯದರ್ಶಿ ನಾಗಸ್ಮಿತ, ಸತೀಶ್ ಕೈದಾಳೆ ಮತ್ತಿತರರು ಪಾಲ್ಗೊಂಡಿದ್ದರು.

Next Post
ಕೇಂದ್ರದಿಂದ ಪದೇ ಪದೇ ಅನ್ಯಾಯ, ಕನ್ನಡಿಗರ ಹಕ್ಕಿಗಾಗಿ ಹೋರಾಡುತ್ತೇವೆ: ಡಿ. ಕೆ. ಶಿವಕುಮಾರ್

ಕೇಂದ್ರದಿಂದ ಪದೇ ಪದೇ ಅನ್ಯಾಯ, ಕನ್ನಡಿಗರ ಹಕ್ಕಿಗಾಗಿ ಹೋರಾಡುತ್ತೇವೆ: ಡಿ. ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

Recent Posts

  • ಹರಿಹರದಿಂದ ದಾವಣಗೆರೆ ವಿವಿಗೆ ಸಾರಿಗೆ ಬಸ್ ವ್ಯವಸ್ಥೆ: ಬಸ್ ನಲ್ಲಿ ಸಂಚರಿಸಿದ ಪ್ರಭಾ ಮಲ್ಲಿಕಾರ್ಜುನ್
  • ದೇಸಿ ಬೆಳೆ ಸಂರಕ್ಷಣೆಗೆ ಕೃಷಿ ಇಲಾಖೆಯಿಂದ ವಿನೂತನ ಯೋಜನೆ
  • ಜಾರಿ ನಿರ್ದೇಶನಾಲಯ(ED)ವು ಎಲ್ಲಾ ಮಿತಿಗಳನ್ನು ದಾಟುತ್ತಿದೆ: ಸುಪ್ರೀಂಕೋರ್ಟ್ ಗರಂ!
  • ಕೇರಳದಲ್ಲಿ 182 ಕೋವಿಡ್ -19 ಕೇಸ್: ಭಾರತಕ್ಕೆ ಕಂಟಕವಾಗುತ್ತಾ ಮಹಾಮಾರಿ?
  • “ಸಿಂಧೂರ ಅಳಿಸ ಹೊರಟವರು ಮಣ್ಣಲ್ಲಿ ಹೂತು ಹೋಗಿದ್ದಾರೆ”: ನರೇಂದ್ರ ಮೋದಿ ಗುಡುಗು!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In