ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜನಾಕ್ರೋಶ ಇರೋದು ಮೋದಿ ಸರ್ಕಾರದ ವಿರುದ್ಧ, ಜನಾಭಿಪ್ರಾಯ ಇರೋದು ನಮ್ಮಪರ: ಸಿಎಂ ಸಿದ್ದರಾಮಯ್ಯ!

On: May 20, 2025 3:08 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-20-05-2025

ಹೊಸಪೇಟೆ: ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದರು.

ಚಿನ್ನದ ಬೆಲೆ ಈಗ ಎಷ್ಟಿದೆ?

2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment