ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಏ. 22ರಿಂದ 26ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಲೋಕಾಯುಕ್ತ ಪ್ರಕರಣಗಳ ಬಹಿರಂಗ ವಿಚಾರಣೆ

On: March 28, 2025 7:06 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:28-03-2025

ದಾವಣಗೆರೆ: ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಏಪ್ರಿಲ್ 22 ರಿಂದ 26 ರವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಪಲೋಕಾಯುಕ್ತರು ಹಾಗೂ ಅವರೊಂದಿಗೆ ಆಗಮಿಸುವ ಅಪರ ನಿಬಂಧಕರು, ಉಪನಿಬಂಧಕರ ಪ್ರವಾಸದ ಬಗ್ಗೆ ಮಾಹಿತಿ ನೀಡಿದರು. ಉಪಲೋಕಾಯುಕ್ತರು ಏಪ್ರಿಲ್ 22 ರಂದು ರಾತ್ರಿ 8.30 ಕ್ಕೆ ದಾವಣಗೆರೆಗೆ ಆಗಮಿಸಿ ಸಕ್ರ್ಯೂಟ್‍ಹೌಸ್‍ನಲ್ಲಿ ವಾಸ್ತವ್ಯ ಹೂಡುವರು ಎಂದರು.

ಏ.23 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ. 9.45 ರಿಂದ 10.45 ರವರೆಗೆ ದಾವಣಗೆರೆ ನ್ಯಾಯಾಂಗ ಸಂಕೀರ್ಣದಲ್ಲಿನ ಬಾರ್ ಅಸೋಸಿಯೇಷನ್‍ನಲ್ಲಿ ವಕೀಲರೊಂದಿಗೆ ಸಂವಾದ ನಡೆಸುವರು. ಬೆ.11 ರಿಂದ 1.30 ರವರೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಮತ್ತು ಮ.2.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ವಾಸ್ತವ್ಯ ಹೂಡುವರು.

ಏ.24 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.30 ರವರೆಗೆ ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸುವರು. ಮತ್ತು ಇದೇ ಸ್ಥಳದಲ್ಲಿ ಮಧ್ಯಾಹ್ನ2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು, ದೂರು, ಪ್ರಕರಣಗಳನ್ನು ಸ್ವೀಕರಿಸುವರು.

ಸಂಜೆ 5.30 ರಿಂದ 6.30 ರವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಕಂದಾಯ, ಪಂಚಾಯತ್ ರಾಜ್, ಶಿಕ್ಷಣ, ರೇಷ್ಮೆ, ಕೃಷಿ, ತೋಟಗಾರಿಕೆ, ಸಾರಿಗೆ, ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಲೋಕಾಯುಕ್ತ ಕಾಯಿದೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡುವರು.

ಏಪ್ರಿಲ್ 25 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.45 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಲೋಕಾಯುಕ್ತದಲ್ಲಿ ಬಾಕಿ ಇರುವ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ನಡೆಸುವರು. ಸಂಜೆ 6 ರಿಂದ 7 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನ್ಯಾಯಾಂಗ ಅಧಿಕಾರಿಗಳು ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ವಾಸ್ತವ್ಯ ಹೂಡುವರು. ಏ.26 ರಂದುಬೆಳಗ್ಗೆ 7 ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು.

ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದಾದ ಪ್ರಕರಣ:

ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಬಗ್ಗೆ ಹಾಗೂ ಸೌಲಭ್ಯ, ಸೇವೆ ಒದಗಿಸುವಲ್ಲಿ ವಿಳಂಬ, ತಾರತಮ್ಯ, ನಿಯಮ ಪಾಲನೆ ಮಾಡದಿದ್ದಲ್ಲಿ ಏ.24 ರಂದು ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸಲು ವಿವಿಧ ಕೌಂಟರ್‍ಗಳನ್ನು ಇದಕ್ಕಾಗಿ ತೆರೆಯಲಾಗಿರುತ್ತದೆ. ಯಾವುದೇ ಭಯವಿಲ್ಲದೇ ತಮ್ಮ ದೂರುಗಳನ್ನು ಉಪಲೋಕಾಯುಕ್ತರಿಗೆ ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಲು ಪ್ರತ್ಯೇಕ ಕೌಂಟರ್ ಗಳನ್ನು ತೆರೆಯಲಾಗಿರುತ್ತದೆ, ದೂರು ನೀಡಲು ಆಗಮಿಸುವ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರು ಮತ್ತು ಮಧ್ಯಾಹ್ನ ಉಪಹಾರವನ್ನು ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲೆಯ ಅಭಿವೃದ್ದಿಯ ಹಿನ್ನಲೆ ಹಾಗೂ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮತ್ತು ಹಲವು ಸುಧಾರಣೆಗಳನ್ನು ಜಾರಿ ಮಾಡಲು ಎಲ್ಲಾ ಅಧಿಕಾರಿಗಳು ಸೇರಿ ತಂಡವಾಗಿ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಸಂಚಾರಿ ನಿಯಮ ಜಾರಿ, ಹೆಲ್ಮೆಟ್ ಕಡ್ಡಾಯ, ಕಾನೂನು ಸುವ್ಯವ್ಯಸ್ಥೆ, ಕಂದಾಯ ಇಲಾಖೆಯಲ್ಲಿ ಪ್ರಕರಣಗಳ ಶೀಘ್ರ ಇತ್ಯರ್ಥ ಸೇರಿದಂತೆ ಹಲವಾರು ಆಡಳಿತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಆಯಾಮಗಳಲ್ಲಿ ರಾಜ್ಯದ ರ್ಯಾಂಕಿಂಗ್‍ನಲ್ಲಿ 5 ರೊಳಗೆ ಇರುತ್ತದೆ ಎಂದರು.

ಜನರ ಇನ್ನಷ್ಟು ಕುಂದುಕೊರತೆಗಳ ನಿವಾರಣೆಗಾಗಿ ಜನರ ಬಳಿ ಆಡಳಿತ ಕೊಂಡೊಯ್ಯಲು ಜನತಾದರ್ಶನ ಕಾರ್ಯಕ್ರಮವನ್ನು ಏಪ್ರಿಲ್ ಅಂತ್ಯದಿಂದ ಆರಂಭಿಸಲಾಗುತ್ತದೆ ಎಂದರು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಮಾತನಾಡಿ ಸರ್ಕಾರಿ ಇಲಾಖೆಗೆ ಸಂಬಂಧಿಸಿದ ಆಡಳಿತ ಪಕ್ಷಪಾತ, ತಾರತಮ್ಯ, ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬಹುದಾಗಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment