ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ಗುರುತಿಸಿಕೊಂಡಿರುವ ದೊಡ್ಮನೆ ಸೊಸೆ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸುಮಾರು ಚಿತ್ರಗಳನ್ನು ನಿರ್ಮಿಸಿ ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿ ಕೊಟ್ಟಿದ್ದಾರೆ.
ಇಷ್ಟು ದಿನ ಚಿತ್ರರಂಗದಲ್ಲಿ ಮಾತ್ರ ಸಕ್ರಿಯರಾಗಿದ್ದ ಆಶ್ವಿನಿ ಪುನೀತ್ ರಾಜ್ ಕುಮಾರ್ ಈಗ ಶಿಕ್ಷಣ ಕ್ಷೇತ್ರಕ್ಕೂ ಕಾಲಿಡುತ್ತಿರುವ ಮೂಲಕ ತಮ್ಮ ಹಾಗೂ ಅಪ್ಪುವಿನ ಕನಸನ್ನು ನನಸು ಮಾಡುತ್ತಿದ್ದಾರೆ.
ಹೌದು, ಜ್ಯೂನಿಯರ್ ಟೋಸ್ ಇಂಟರ್ನ್ಯಾಷನಲ್ ಫ್ರೀ ಸ್ಕೂಲ್ ಪ್ರಾರಂಭಿಸಲು ಆಶ್ವಿನಿ ಪುನೀತ್ ರಾಜ್ ಕುಮಾರ್ ರವರು ಸ್ಪೂರ್ತಿ ವಿಶ್ವಾಸ್, ಶೃತಿ ಕಿರಣ್, ಸುನೀತಾ ಗೌಡ ಮತ್ತು ಡಾ.ಬಿಂದು ರಾಣಾ ಜೊತೆ ಕೈಜೋಡಿಸಿದ್ದಾರೆ.
ಜ್ಯೂನಿಯರ್ ಟೋಸ್ ಇಂಟರ್ನ್ಯಾಷನಲ್ ಫ್ರೀ ಸ್ಕೂಲ್ ಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕೋ-ಫೌಂಡರ್ ಮತ್ತು ಡೈರೆಕ್ಟರ್ ಆಗಿದ್ದಾರೆ, ಈ ನಿಟ್ಟಿನಲ್ಲಿ ಆಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಎಜುಕೇಶನ್ ಸೆಕ್ಟರ್ ಗೆ ಮೊದಲ ಹೆಜ್ಜೆಯನ್ನು ಇಟ್ಟಿದ್ದಾರೆ.
ಜ್ಯೂನಿಯರ್ ಟೋಸ್ ಇಂಟರ್ನ್ಯಾಷನಲ್ ಫ್ರೀ ಸ್ಕೂಲ್ ಇದು ಬೆಂಗಳೂರಿನ ಐದು ಕೇಂದ್ರಗಳಲ್ಲಿ ಪ್ರಾರಂಭಗೊಳ್ಳಲಿದೆ.