ಹೋಷಿಯಾರ್ಪುರ (ಪಂಜಾಬ್): ರಜೆಯ ಮೇಲೆ ಮನೆಗೆ ಬಂದಿದ್ದ ಭಾರತೀಯ ಸೇನಾ ಯೋಧನೊಬ್ಬ ತನ್ನ ಹೆಂಡತಿಯನ್ನು ಹೊಡೆದು ಕೊಲೆ ಮಾಡಿ, ಆಕೆ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ನಂಬಿಸಲು ಯತ್ನಿಸಿದ ಘಟನೆ ಪಂಜಾಬ್ನ ಹೋಷಿಯಾರ್ಪುರ ಜಿಲ್ಲೆಯ ಸುನೇಹ್ರಾ ಗ್ರಾಮದಲ್ಲಿ ನಡೆದಿದೆ.
ಆರೋಪಿ ಯೋಧ ಅಮರ್ಜೀತ್ ಸಿಂಗ್ ಎಂಬಾತನನ್ನು ಪೊಲೀಸರು ಬಂದಿಸಿದ್ದಾರೆ.
ಮೃತರನ್ನು ರಮಾ ಎಂದು ಗುರುತಿಸಲಾಗಿದೆ. ಆಗಸ್ಟ್ 13 ರಂದು ಮನೆಗೆ ಬಂದಿದ್ದ ಅಮರ್ಜೀತ್ ತನ್ನ ಪತ್ನಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.
ತದನಂತರ ಆಕೆ ಮಹಡಿಯಿಂದ ಬಿದ್ದಿದ್ದಾಳೆ ಎಂದು ಹೇಳಿ ಆಸ್ಪತ್ರೆಗೆ ಸೇರಿಸಿದ್ದನು. ಆದರೆ ಮೃತಳ ದೇಹದ ಮೇಲೆ ತೀವ್ರ ಗಾಯದ ಗುರುತುಗಳು ಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಯೋಧ ಅಮರ್ಜೀತ್ ಸಿಂಗ್ ಹಾಗೂ ಪ್ರಕರಣ ಮುಚ್ಚಿಹಾಕಲು ಸಹಕರಿಸಿದ ಆತನ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.





Leave a comment