Site icon Kannada News-suddikshana

ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ: 5800 ಹೊಸ ಬಸ್ ಗಳ ಸೇರ್ಪಡೆಗೆ ಅನುಮೋದನೆ, 4891 ಬಸ್ ಗಳ ಖರೀದಿ!

SUDDIKSHANA KANNADA NEWS/ DAVANAGERE/ DATE:26-02-2025

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ. ಹೊಸದಾಗಿ 5,800 ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಈವರೆಗೆ 4,891 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದೆ.

ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದೆ.

ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ 1,54,955 ಟ್ರಿಪ್‌ಗಳ ಪ್ರಮಾಣವು 1,76,787 ಕ್ಕೆ ಜಾಸ್ತಿಯಾಗಿದೆ. ಪ್ರತಿದಿನ 21,832 ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆಯಾಗುತ್ತಿದೆ. ಈ ಮೂಲಕ ನಾಡಿನ ಮಹಿಳೆಯರಿಗೂ ಅನುಕೂಲವಾಗಿರುವ, ಸಾರಿಗೆ ಸಂಸ್ಥೆಗಳಿಗೂ ಲಾಭ ತಂದುಕೊಡುತ್ತಿರುವ ಶಕ್ತಿ ಯೋಜನೆ ರಾಜ್ಯದಲ್ಲಿ ಸಂಪರ್ಕ ಕ್ರಾಂತಿ ಸೃಷ್ಟಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Exit mobile version