Home ದಾವಣಗೆರೆ ಮತಗಳ್ಳತನ ವಿರುದ್ಧ “ಕ್ವಿಟ್ ವೋಟ್ ಚೋರಿ ಚಳುವಳಿ” ಅಗತ್ಯ: ಸಿಎಂ ಡಿ ಕೆ ಶಿವಕುಮಾರ್
ದಾವಣಗೆರೆನವದೆಹಲಿಬೆಂಗಳೂರು

ಮತಗಳ್ಳತನ ವಿರುದ್ಧ “ಕ್ವಿಟ್ ವೋಟ್ ಚೋರಿ ಚಳುವಳಿ” ಅಗತ್ಯ: ಸಿಎಂ ಡಿ ಕೆ ಶಿವಕುಮಾರ್

Share
ಡಿ ಕೆ ಶಿವಕುಮಾರ್
Share

ಬೆಂಗಳೂರು: “ದೇಶದಲ್ಲಿ ಮತಗಳ್ಳತನ ನಡೆಯುತ್ತಿದ್ದು, ಇದರ ವಿರುದ್ಧ ನಾವು ಕ್ವಿಟ್ ವೋಟ್ ಚೋರಿ ಚಳುವಳಿ ಮಾಡಬೇಕಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕ್ವಿಟ್ ಇಂಡಿಯಾ ದಿನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಮತದಾನದ ಹಕ್ಕು, ಬದುಕಿನ ಹಕ್ಕು, ಹೀಗಾಗಿ ಅದನ್ನು ಉಳಿಸಿಕೊಳ್ಳಿ

“ನೀವು ಎಲ್ಲಾ ಕೆಲಸ ಬದಿಗಿಟ್ಟು ಮತಗಳ್ಳತನ ವಿರುದ್ಧ ಹೋರಾಟ ಮಾಡಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು ಎಂದು ರಾಜ್ಯದ ಕಾರ್ಯಕರ್ತರಲ್ಲಿ ಮನವಿ ಮಾಡುವೆ. ರಾಜ್ಯದಲ್ಲಿ ಎಸ್ ಐಆರ್ ನಡೆಯುತ್ತಿದ್ದು, ರಾಜ್ಯದಲ್ಲಿ 1 ಕೋಟಿ ಮತದಾರರನ್ನು ಡಿಲೀಟ್ ಮಾಡಲು ಪ್ರಯತ್ನ ನಡೆಯುತ್ತಿದೆ. ನೀವು ನಿಮ್ಮ ಮತಗಳನ್ನು ಉಳಿಸಿಕೊಳ್ಳಬೇಕು ಎಂದರು.

ಬದುಕಿಗಾಗಿ ಮತದಾನದ ಹಕ್ಕು ಉಳಿಸಿಕೊಳ್ಳಬೇಕು ಎಂದು ನಮ್ಮ ಕಾರ್ಯಕರ್ತರು ಹಾಗೂ ಬಿಎಲ್ಎ2ಗಳಿಗೆ ಮನವಿ ಮಾಡುತ್ತಿದ್ದೇವೆ. ನಾವು ಗ್ಯಾರಂಟಿ ಯೋಜನೆಗಳನ್ನು ಜನರಿಗಾಗಿ ನೀಡಿದ್ದು, ಮತದಾನದ ಹಕ್ಕು ಇಲ್ಲದವರಿಗೆ ಈ ಯೋಜನೆಗಳು ಲಭ್ಯವಾಗುವುದು ಕಷ್ಟವಾಗುತ್ತದೆ. ಬಿಹಾರದಲ್ಲಿ ಈಗಾಗಲೇ ಮತದಾನದ ಹಕ್ಕು ಇರುವವರಿಗೆ ಮಾತ್ರ ಸರ್ಕಾರಿ ಯೋಜನೆ ನೀಡಲಾಗುತ್ತಿದೆ. ಹೀಗಾಗಿ ಎಲ್ಲರ ಮತದಾನದ ಹಕ್ಕನ್ನು ಉಳಿಸಬೇಕು ಎಂದು ತಿಳಿಸಿದರು.

ಗಣತಿ ನಮೂನೆ ತುಂಬಿ ಹಿಂತಿರುಗಿಸಿ. ಎಲ್ಲರಿಗೂ ಬಿಎಲ್ಎ2 ಆಗಲು ಸಾಧ್ಯವಿಲ್ಲ. ನಿಮಗೆ ಸಿಕ್ಕಿರುವ ಅವಕಾಶವನ್ನು ಉಳಿಸಿಕೊಳ್ಳಬೇಕು. ರಾಹುಲ್ ಗಾಂಧಿ ಅವರನ್ನು ಈ ದೇಶದ ಪ್ರಧಾನಮಂತ್ರಿಯಾಗಲು ಇದು ಪೂರಕ ಹೆಜ್ಜೆಯಾಗಲಿದೆ ಎಂದರು.

“18 ವರ್ಷ ತುಂಬಿರುವ ಯುವಕರಿಗೆ ಫಾರಂ 6 ಮೂಲಕ ಮತದಾನದ ಹಕ್ಕನ್ನು ಪಡೆಯಲು ಮುಂದಾಗಿ. ಮತದಾನದ ಹಕ್ಕಿಲ್ಲ ಎಂದರೆ ನಿಮಗೆ ಧ್ವನಿ ಇರುವುದಿಲ್ಲ. ರಾಜೀವ್ ಗಾಂಧಿ ಅವರು ಮತದಾನದ ಹಕ್ಕನ್ನು 18 ವರ್ಷಕ್ಕೆ ಇಳಿಸಿದಾಗ ಎಲ್ಲ ವಿರೋಧ ಪಕ್ಷದವರು ವಿರೋಧಿಸಿದರು. ಆದರೆ ರಾಜೀವ್ ಗಾಂಧಿ ಅವರು 10ನೇ ತರಗತಿ ಪಾಸಾದ ವಿದ್ಯಾರ್ಥಿಗೆ ದೇಶ ಕಾಯುವ ಜವಾಬ್ದಾರಿ ನೀಡುತ್ತಿರುವಾಗ ಮತದಾನದ ಹಕ್ಕು ಯಾಕೆ ನೀಡಬಾರದು ಎಂದು ಪ್ರಶ್ನಿಸಿದ್ದರು” ಎಂದರು.

“ನಾನು ಮುಖ್ಯಮಂತ್ರಿಯಾಗಿದ್ದರೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ. ಕಾರ್ಯಕರ್ತರಿದ್ದರೆ ಪಕ್ಷ, ಪಕ್ಷ ಇದ್ದರೆ ಸರ್ಕಾರ. ಇದನ್ನು ನಾವೆಲ್ಲರೂ ನೆನಪಿನಲ್ಲಿ ಇರಬೇಕು. ಅಧಿಕಾರ ತಾತ್ಕಾಲಿಕ ಎಂಬುದನ್ನು ಮರೆಯಬಾರದು. ಸ್ವಾತಂತ್ರ್ಯಕ್ಕೆ ಬೆಲ ಕಟ್ಟಲು ಆಗುವುದಿಲ್ಲ. ಸ್ವಾತಂತ್ರ್ಯ ಜೀವನದ ಉಸಿರು. ದೇಶದ ಸ್ವಾತಂತ್ರ್ಯಕ್ಕೆ ಮುನ್ನುಡಿ ಬರೆದ ಪವಿತ್ರವಾದ ದಿನ. ಕಾಂಗ್ರೆಸ್ ಕಚೇರಿ ಭಾರತ ಜೋಡೋ ಭವನದಲ್ಲಿ ಪವಿತ್ರವಾದ ಕಾರ್ಯಕ್ರಮ ಮಾಡುತ್ತಿದ್ದೇವೆ. ಅಂದು ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂಬ ಘೋಷವಾಕ್ಯ ಮೊಳಗಿತ್ತು, ಇಂದು ಸರ್ವಾಧಿಕಾರಿ ಮನಸ್ಥಿತಿ ಅಧಿಕಾರ ಬಿಟ್ಟು ತೊಲಗಿ ಎಂದು ಘೋಷವಾಕ್ಯ ಕೂಗಬೇಕಿದೆ. ಅಂದು ಸ್ವರಾಜ್ಯ ನಮ್ಮ ಜನ್ಮಸಿದ್ಧ ಹಕ್ಕು, ಇಂದು ಪ್ರತಿಭಟನೆ ನಮ್ಮ ಜನ್ಮಸಿದ್ಧ ಹಕ್ಕು ಎಂದು ಹೇಳಬೇಕಾಗಿದೆ. ಗಾಂಧಿಜಿ ಅವರ ನೇತೃತ್ವದಲ್ಲಿ ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಸಂಕಲ್ಪ ಮಾಡಿದ ದಿನ. ನೆಹರು, ಸರ್ದಾರ್ ಪಟೇಲ್, ಮೌಲಾನ ಅಬುಲ್ ಕಲಾಂ ಸೇರಿದಂತೆ ಎಲ್ಲಾ ನಾಯಕರು ಈ ಚಳುವಳಿಯಲ್ಲಿ ಹೆಜ್ಜೆ ಹಾಕಿದ್ದರು” ಎಂದು ಸ್ಮರಿಸಿದರು.

“ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾಗ ನಮ್ಮನ್ನು ಗುಜರಾತಿಗೆ ಕರೆದುಕೊಂಡು ಹೋಗಿ ಬೆಳಗ್ಗೆ ಆ ಪವಿತ್ರವಾದ ಭೂಮಿಯಲ್ಲಿ ಹೆಜ್ಜೆ ಹಾಕಿದ್ದೆವು. ಹಿರಿಯರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ವ್ಯವಸ್ಥೆ, ಸಮಾನತೆಯಿಂದ ಬಾಳುವ ಅವಕಾಶ ಸಿಕ್ಕಿದೆ. ಸಂವಿಧಾನವೇ ನಮಗೆ ಬೈಬಲ್, ಕುರಾನ್, ಭಗವದ್ಗೀತೆಯಾಗಿದೆ. ನನ್ನ ಹೆಗಲ ಮೇಲೆ ತ್ರಿವರ್ಣಧ್ವಜವಿದೆ. ಬೇರೆ ಯಾವುದೇ ಪಕ್ಷದ ನಾಯಕರು ಇದನ್ನು ಹಾಕಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರು, ನಾಯಕರು ಸತ್ತರೆ ರಾಷ್ಟ್ರಧ್ವಜ ಹೊದಿಸಿ ಗೌರವಿಸುತ್ತೇವೆ. ಈ ತ್ರಿವರ್ಣ ಧ್ವಜವನ್ನು ಹೆಗಲ ಮೇಲೆ ಹಾಕಿಕೊಳ್ಳುವ ಅವಕಾಶವನ್ನು ಪಕ್ಷ ಕಾರ್ಯಕರ್ತರಿಗೆ ನೀಡಿದೆ. ಇದನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ” ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles