Home ದಾವಣಗೆರೆ ಗಣೇಶ ಮೆರವಣಿಗೆ ಮಸೀದಿ ಹೋಗಬಾರದಂತೆ, ಪಟಾಕಿ ಹೊಡೆಯಬಾರದಂತೆ: ಕರ್ನಾಟಕದಲ್ಲಿ ಇರೋದು ಸಂವಿಧಾನದ ಆಡಳಿತವೋ, ಶರಿಯಾ ಕಾನೂನೇ?
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಗಣೇಶ ಮೆರವಣಿಗೆ ಮಸೀದಿ ಹೋಗಬಾರದಂತೆ, ಪಟಾಕಿ ಹೊಡೆಯಬಾರದಂತೆ: ಕರ್ನಾಟಕದಲ್ಲಿ ಇರೋದು ಸಂವಿಧಾನದ ಆಡಳಿತವೋ, ಶರಿಯಾ ಕಾನೂನೇ?

Share
ಗಣೇಶ
Share

ಬೆಂಗಳೂರು: ಗಣೇಶೋತ್ಸವ ಮೆರವಣಿಗೆ ಮಸೀದಿ ಮುಂದೆ ಹೋಗಬಾರದಂತೆ! ಗಣೇಶೋತ್ಸವ ಮೆರವಣಿಗೆಯಲ್ಲಿ ಮಸೀದಿ ಮುಂದೆ ಪಟಾಕಿ ಹೊಡೆಯಬಾರದಂತೆ! ಕರ್ನಾಟಕದಲ್ಲಿ ಇರುವುದು ಸಂವಿಧಾನದ ಆಡಳಿತವೋ ಅಥವಾ ಶರಿಯಾ ಕಾನೂನೋ? ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಇರುವುದು ಪ್ರಜಾಪ್ರಭುತ್ವವೋ ಅಥವಾ ತಾಲಿಬಾನಿ ಹುಕುಮ್ಮತ್ತೋ? ಇದೇನಾ ‘ಎಲೆಕ್ಷನ್‌ ಹಿಂದೂ’ ಡಿ. ಕೆ. ಶಿವಕುಮಾರ್ ಸರ್ಕಾರದ ನಿಜವಾದ ಭಕ್ತಿ? ಎಂದು ಪ್ರಶ್ನಿಸಿದ್ದಾರೆ.

ಹಿಂದೂಗಳ ಪವಿತ್ರ ಹಬ್ಬ ಗಣೇಶೋತ್ಸವದ ಆಚರಣೆಗೆ ಇಲ್ಲಸಲ್ಲದ ನಿರ್ಬಂಧ ಹೇರಿ, ಭಕ್ತಾದಿಗಳಿಗೆ ಬೆದರಿಕೆ ಹಾಕುವ ಮಟ್ಟಕ್ಕೆ ಪೊಲೀಸರು ಇಳಿದಿರುವುದು ಈ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ, ಓಲೈಕೆ ರಾಜಕಾರಣ ಯಾವ ಪರಾಕಾಷ್ಠೆಗೆ ತಲುಪಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನವಾಗಿದೆ  ಎಂದು ಕಿಡಿಕಾರಿದ್ದಾರೆ.

ಕಳೆದ ವರ್ಷ ಸ್ವತಃ ಗಣಪತಿಯ ವಿಗ್ರಹವನ್ನೇ ಪೊಲೀಸ್ ವ್ಯಾನ್‌ಗೆ ಹತ್ತಿಸಿ ಅವಮಾನಿಸಿದ ಈ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ, ಈ ಬಾರಿ ಗಣೇಶನನ್ನು ಕೂರಿಸುವ ಮುನ್ನವೇ ಹಿಂದೂ ಸಮಾಜದ ಧಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ರಿಟಿಷರ ಆಡಳಿತದ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಲೋಕಮಾನ್ಯ ತಿಲಕರಿಂದ ಆರಂಭಗೊಂಡ ಸಾರ್ವಜನಿಕ ಸಾಮೂಹಿಕ ಗಣೇಶೋತ್ಸವ ಇಂದಿಗೂ ದೇಶಾದ್ಯಂತ ಕೋಟ್ಯಂತರ ಭಾರತೀಯರ ಸಾಂಸ್ಕೃತಿಕ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಹಿಂದೂಗಳ ಧಾರ್ಮಿಕ ಭಾವನೆಗಳ ಮೇಲೆ ಸವಾರಿ ಮಾಡುವ ದುಸ್ಸಾಹಸಕ್ಕೆ ಕೈಹಾಕಬೇಡಿ. ಹಿಂದೂಗಳ ಆಚರಣೆ ಮತ್ತು ಭಕ್ತಿಗೆ ಅಡ್ಡಿಪಡಿಸಿದ ಯಾವ ಸರ್ಕಾರವೂ ಉಳಿದಿಲ್ಲ. ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡಿದರೆ, ಈ ಕಾಂಗ್ರೆಸ್ ಸರ್ಕಾರ ಧೂಳಿಪಟವಾಗುವುದು ನಿಶ್ಚಿತ! ಎಂದು ಭವಿಷ್ಯ ನುಡಿದಿದ್ದಾರೆ.

ತಕ್ಷಣವೇ ಈ ಹಿಂದೂ ವಿರೋಧಿ ನಿರ್ಬಂಧಗಳನ್ನು ಹಿಂಪಡೆಯಿರಿ. ಹಿಂದೂಗಳು ನೆಮ್ಮದಿಯಿಂದ, ಗಣೇಶೋತ್ಸವ ಆಚರಿಸಲು ಬಿಡಿ. ಇಲ್ಲವಾದಲ್ಲಿ ನಿಮ್ಮ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.