ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ರಾಘವೇಂದ್ರ ಎನ್ ಬಿ. ಆಯ್ಕೆ

On: December 3, 2024 6:41 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-12-2024

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರ.

ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ, ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ, ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment