ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಯುಎಸ್ ಭೇಟಿಯ ವೇಳೆ ಮಾಡಿದ ಹೇಳಿಕೆಗಳ ಮೂಲಕ ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಗ್ರಾ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಅಶೋಕ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಿಖ್ಖರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ದೇಶದ ಸಮಗ್ರತೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ.
ಮೀಸಲಾತಿ ಕುರಿತು ಟೀಕೆ ಮಾಡಿದ ಆರೋಪವನ್ನೂ ಹೊರಿಸಲಾಗಿದೆ ಎಂದು ಸಿಗ್ರಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನೋಜ್ ಕುಮಾರ್ ಮಿಶ್ರಾ ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.