Home ಕ್ರೈಂ ನ್ಯೂಸ್ “ಮೊದಲು ಮೂಳೆ ಮುರಿದರು, ಈಗ FIR ಹಾಕ್ತಿದ್ದಾರೆ”, ‘ಜೆನ್ ಜಿಯನ್ನು ಹೆದರಿಸಲು ಸಾಧ್ಯವಿಲ್ಲ’: ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ರಾಹುಲ್ ಗಾಂಧಿ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

“ಮೊದಲು ಮೂಳೆ ಮುರಿದರು, ಈಗ FIR ಹಾಕ್ತಿದ್ದಾರೆ”, ‘ಜೆನ್ ಜಿಯನ್ನು ಹೆದರಿಸಲು ಸಾಧ್ಯವಿಲ್ಲ’: ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ರಾಹುಲ್ ಗಾಂಧಿ!

Share
ರಾಹುಲ್ ಗಾಂಧಿ
Share

ನವದೆಹಲಿ: ನೀಟ್ ಪರೀಕ್ಷೆ ಅಕ್ರಮ ಹಾಗೂ ಪಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರ (Gen Z) ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಶುಕ್ರವಾರ ‘X’ (ಟ್ವಿಟರ್) ತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರೇ – ನೀವು ‘ಜೆನ್ ಜಿ’ (Gen Z) ಯುವಕರನ್ನು ಬೆದರಿಸಿ ಸುಮ್ಮನಿರಿಸಲು ಸಾಧ್ಯವಿಲ್ಲ. ಮೊದಲು ಅವರ ಮೂಳೆಗಳನ್ನು ಮುರಿದಿರಿ, ಈಗ ಅವರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿ, ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ತಡೆಹಿಡಿಯುತ್ತಿದ್ದೀರಿ. ನೀವು ಭಾರತದ ಗತಕಾಲ, ಭಾರತದ ಭವಿಷ್ಯವಾದ ಯುವಜನರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದರ ಕುರಿತು ಎಚ್ಚರಿಕೆಯಿಂದಿರಿ,” ಎಂದು ರಾಹುಲ್ ಗಾಂಧಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆಗೆ ಆಗ್ರಹ

ನೀಟ್ ಪ್ರತಿಭಟನೆ ವೇಳೆ ದೆಹಲಿ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೋಲಿಸ್ ಲಾಠಿಚಾರ್ಜ್ ಹಾಗೂ ದೌರ್ಜನ್ಯವನ್ನು ಖಂಡಿಸಿರುವ ರಾಹುಲ್ ಗಾಂಧಿ, ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಉನ್ನತ ಮಟ್ಟದ ಸ್ವತಂತ್ರ ತನಿಖಾ ಸಮಿತಿ ರಚಿಸಬೇಕೆಂದು ಆಗ್ರಹಿಸಿದ್ದಾರೆ. ಪರೀಕ್ಷಾ ಪೇಪರ್ ಸೋರಿಕೆ ತಡೆಯಲು ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆ ತರುವುದು ಅಗತ್ಯ ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ತಿರುಗೇಟು

ಇನ್ನೊಂದೆಡೆ, ರಾಹುಲ್ ಗಾಂಧಿ ಅವರ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಆಡಳಿತಾರೂಢ ಬಿಜೆಪಿ, ರಾಹುಲ್ ಗಾಂಧಿ ಸಂಸತ್ತಿನಲ್ಲಿ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದು, ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

Share

Leave a comment

Leave a Reply

Your email address will not be published. Required fields are marked *