ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚರ್ಚೆಯ ಸವಾಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಖಾಮುಖಿ ಚರ್ಚೆಗೆ ಮತ್ತೊಮ್ಮೆ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ, ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಜೆಡಿಯು ನಾಯಕರು ರಾಹುಲ್ ಗಾಂಧಿಗೆ ತೀವ್ರ ತಿರುಗೇಟು ನೀಡಿದ್ದಾರೆ.
ಅಮಿತ್ ಶಾ ಅವರು ಇವಿಎಂ (EVM) ಹಾಗೂ ಎಸ್‌ಐಆರ್ (SIR) ವಿಚಾರವಾಗಿ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಸಲು ಸವಾಲು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಯಾವುದೇ ವೇದಿಕೆ ಅಥವಾ ಸ್ಥಳವನ್ನು ಆರಿಸಿಕೊಳ್ಳಿ, ಈ ವಿಷಯಗಳ ಬಗ್ಗೆ ಬಹಿರಂಗ ಚರ್ಚೆಗೆ ತಾವು ಸಿದ್ಧವಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕಿದ್ದಾರೆ. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿರ್ಮಲಾ ಸೀತಾರಾಮನ್, ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಸಂಸತ್ತಿನ ಒಳಗೆ ಬಂದು ಚರ್ಚೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ವಾಗ್ದಾಳಿ: ಸಂಸತ್ತಿನಲ್ಲಿ ಚರ್ಚೆ ನಡೆಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕುವುದು ಸರಿಯಲ್ಲ. ಸಂಸತ್ತಿನ ನಿಯಮಗಳು ಮತ್ತು ಮೌಲ್ಯಗಳನ್ನು ಗೌರವಿಸುವಂತೆ ವಿತ್ತ ಸಚಿವೆ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
ಜೆಡಿಯು ಪ್ರತಿಕ್ರಿಯೆ: ಸಂಸದೀಯ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿದ್ದರೆ, ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರ ಸವಾಲನ್ನು ಸ್ವೀಕರಿಸಿ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಜೆಡಿಯು ರಾಷ್ಟ್ರೀಯ ವಕ್ತಾರ ರಾಜೀವ್ ರಂಜನ್ ಪ್ರಸಾದ್ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪ್ರತಿವಾಧನೆ: ಅಮಿತ್ ಶಾ ಸವಾಲಿನಲ್ಲಿ ಗಂಭೀರತೆಯಿದ್ದರೆ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಪಡೆಯಲಿ ಎಂದು ಕಾಂಗ್ರೆಸ್ ಪಕ್ಷ ವಾಗ್ದಾಳಿ ನಡೆಸಿದೆ.





Leave a comment