Home ಕ್ರೈಂ ನ್ಯೂಸ್ ಜ್ಞಾನೇಶ್ ಕುಮಾರ್ ಜೈಲಿಗೆ ಹೋಗಲಿದ್ದಾರೆ, ಮೋದಿಗೆ ಶಿಕ್ಷೆ ಕಟ್ಟಿಟ್ಟಬುತ್ತಿ ಎಂದ ರಾಹುಲ್ ಗಾಂಧಿ: 1984ರ ಗಲಭೆ ನೆನಪಿಸಿ ತಿರುಗೇಟು ನೀಡಿದ ಅಮಿತ್ ಶಾ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಜ್ಞಾನೇಶ್ ಕುಮಾರ್ ಜೈಲಿಗೆ ಹೋಗಲಿದ್ದಾರೆ, ಮೋದಿಗೆ ಶಿಕ್ಷೆ ಕಟ್ಟಿಟ್ಟಬುತ್ತಿ ಎಂದ ರಾಹುಲ್ ಗಾಂಧಿ: 1984ರ ಗಲಭೆ ನೆನಪಿಸಿ ತಿರುಗೇಟು ನೀಡಿದ ಅಮಿತ್ ಶಾ!

Share
ಜ್ಞಾನೇಶ್ ಕುಮಾರ್
Share

ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’  ಒಕ್ಕೂಟವು ಹಮ್ಮಿಕೊಂಡಿದ್ದ ಬೃಹತ್ ‘ಚಲೋ ದಲ್ಲಿ’ ಪ್ರತಿಭಟನಾ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ತೀವ್ರ ವಾಗ್ದಾಳಿ ನಡೆಸಿದರು. ಚುನಾವಣಾ ಆಯೋಗವು ಮತ ಕಳವಿಗೆ (‘ವೋಟ್ ಚೋರಿ’) ಸಹಕರಿಸಿದೆ ಎಂದು ಆರೋಪಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಜೈಲಿಗೆ ಹೋಗುವುದು ಖಚಿತ ಎಂದು ಎಚ್ಚರಿಸಿದರು.

ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಗುಡುಗಿದರು.

ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, 2024ರ ಲೋಕಸಭಾ ಚುನಾವಣೆಯ ನಂತರ ದೇಶದ ಶೇಕಡಾ 15ರಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ. ಇದು ಕೇವಲ ಕಳ್ಳತನವಲ್ಲ, ಬದಲಿಗೆ ದೇಶದ ಪ್ರತಿಯೊಬ್ಬ ನಾಗರಿಕನ ಧ್ವನಿಯನ್ನು ದಮನ ಮಾಡುವ ಸಂಚು ಎಂದು ಕಿಡಿಕಾರಿದರು. ರಾಹುಲ್ ಗಾಂಧಿ ಅವರ ಈ ಆರೋಪಕ್ಕೆ ಚಂಡೀಗಢದಲ್ಲಿ ತಿರುಗೇಟು ನೀಡಿದ ಗೃಹ ಸಚಿವ ಅಮಿತ್ ಶಾ, ಸಿಖ್ ವಿರೋಧಿ 1984ರ ಹತ್ಯಾಕಾಂಡದ ವಾರ್ಷಿಕೋತ್ಸವದಂದೇ ದೆಹಲಿಯಲ್ಲಿ ರಾಜಕೀಯ ರ್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷವು ಬಲಿಪಷುಗಳ ಗಾಯದ ಮೇಲೆ ಬರೆ ಎಳೆದಿದೆ ಎಂದು ತೀವ್ರವಾಗಿ ಖಂಡಿಸಿದರು.

ಚುನಾವಣಾ ಆಯುಕ್ತರ ವಿರುದ್ಧ ಕಾನೂನು ಕ್ರಮ: ಮತದಾರರ ಪಟ್ಟಿ ತಿರುಚುವಿಕೆ ಮತ್ತು ಮತ ಕಳವು ಪ್ರಕರಣದಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಂಡು ಜೈಲಿಗಟ್ಟಲಾಗುವುದು ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

1984ರ ಗಲಭೆಯ ನೆನಪು: ವಿಪಕ್ಷಗಳ ರ್ಯಾಲಿಯ ಸಮಯವನ್ನು ಟೀಕಿಸಿರುವ ಅಮಿತ್ ಶಾ, ಸಿಖ್ ಹತ್ಯಾಕಾಂಡದ ಕರಾಳ ದಿನದಂದೇ ದೆಹಲಿಯಲ್ಲಿ ರಾಜಕೀಯ ಪ್ರದರ್ಶನ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

ವಿಪಕ್ಷಗಳ ಜಂಟಿ ಆಕ್ರೋಶ: ಮಲ್ಲಿಕಾರ್ಜುನ ಖರ್ಗೆ, ತೇಜಸ್ವಿ ಯಾದವ್, ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಸರ್ಕಾರದ ದಬ್ಬಾಳಿಕೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರೆ, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ‘ಇಂಡಿಯಾ’ ಮೈತ್ರಿಕೂಟ ಸ್ಪಷ್ಟಪಡಿಸಿದೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles