Site icon Kannada News-suddikshana

ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ನಾಳೆ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಅವರು ಆಯ್ಕೆಯಾಗಿದ್ದಾರೆ.

ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್ ನಾಯಕರು ಈ ಹಿಂದೆ ಆಗ್ರಹಿಸಿದ್ದರು. ಆದರೆ ರಾಹುಲ್ ಗಾಂಧಿ ಅವರು ಇದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರಾಹುಲ್ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.

ಮೋದಿ ಮೊದಲ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಎರಡನೇ ಅವಧಿಯಲ್ಲಿ ಅಧಿರಂಜನ್ ಚೌಧರಿ ಲೋಕಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಆಗಿದ್ದರು. ಇದೀಗ ಮೂರನೇ ಅವಧಿಯಲ್ಲಿ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಆಗಿದ್ದಾರೆ.

Exit mobile version