SUDDIKSHANA KANNADA NEWS/ DAVANAGERE/DATE:18_08_2025
ಬೆಂಗಳೂರು: ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ವರುಣಾರ್ಭಟ ಜೋರಾಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
READ ALSO THIS STORY: ಡಿ. ಕೆ. ಶಿವಕುಮಾರ್ ಆಪ್ತ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಗೆ ಶಾಕ್ ಕೊಟ್ಟ ಕಾಂಗ್ರೆಸ್ ಶಿಸ್ತು ಸಮಿತಿ!
ರಾಜ್ಯದಲ್ಲಿ ಮತ್ತಷ್ಟು ಮಳೆ ಹೆಚ್ಚಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರವು ರೆಡ್ ಅಲರ್ಟ್ ಘೋಷಿಸಿರುವ ಜಿಲ್ಲಾಡಳಿತಕ್ಕೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಹಾಗೂ ಪ್ರವಾಹ ತಲೆದೋರುವ ಸಾಧ್ಯತೆ ಇರುವ ಕಾರಣ ಸನ್ನದ್ಧರಾಗುವಂತೆ ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಇದ್ದು, ಇದರ ಪರಿಣಾಮ ರಾಜ್ಯದ ಮೇಲೂ ಬೀಳಲಿದೆ. ಆಗಸ್ಟ್ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ವರುಣಾರ್ಭಟ ಇದ್ದು, ಕೆಂಪು ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ತುಮಕೂರ ಜಿಲ್ಲೆಗಳಲ್ಲೂ ಮಳೆ ಆಗಲಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆ, ಕಮ್ಮರಡಿ, ಗೇರುಸೊಪ್ಪ, ಶೃಂಗೇರಿ, ಸಿದ್ದಾಪುರ, ಕೊಪ್ಪ, ಧರ್ಮಸ್ಥಳ, ಭಾಗಮಂಡಲದಲ್ಲಿ ಭಾರೀ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ, ಜಯಪುರ, ಬೆಳ್ತಂಗಡಿ, ಸುಳ್ಯ, ಮುನಿರಾಬಾದ್, ಲೋಂಡಾ, ಕಳಸ, ಕದ್ರಾ, ಸೋಮವಾರಪೇಟೆ, ಶಕ್ತಿನಗರ, ನಾಪೋಕ್ಲು, ಕೊಟ್ಟಿಗೆಹಾರ, ಖಾನಾಪುರ, ಹುಂಚದಕಟ್ಟೆ, ಬಂಟವಾಳ, ಯಲ್ಲಾಪುರದಲ್ಲಿ ಮಳೆಯಾಗಿದೆ. ನೆಲೋಗಿ, ಮುಲ್ಕಿ, ಮಂಕಿ, ಮಾಣಿ, ಮಂಗಳೂರು, ಕಾರ್ಕಳ, ಜೇವರ್ಗಿ, ಹೊನ್ನಾವರ, ಬೆಳಗಾವಿ, ಬಾಳೆಹೊನ್ನೂರು, ಔರಾದ್, ಝಲ್ಕಿ, ಉಪ್ಪಿನಂಗಡಿ, ತ್ಯಾಗರ್ತಿ, ಸೇಡಬಾಳ, ಪುತ್ತೂರು ಸೇರಿದಂತೆ ವಿವಿಧೆಡೆ ಉತ್ತಮ ಮಳೆ ಸುರಿದಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಆರ್ಭಟಿಸಲಿದ್ದು, ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಾವಣಗೆರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, ಮೈಸೂರು, ಕೋಲಾರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.