Home ದಾವಣಗೆರೆ ಸ್ವಂತ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ ಮಗು ಮಾರಿದ ಕಾಮುಕ ತಂದೆ: ವೈದ್ಯ ಸೇರಿ 6 ಆರೋಪಿಗಳ ಬಂಧನ!
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ಸ್ವಂತ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ ಮಗು ಮಾರಿದ ಕಾಮುಕ ತಂದೆ: ವೈದ್ಯ ಸೇರಿ 6 ಆರೋಪಿಗಳ ಬಂಧನ!

Share
ತಂದೆ
Share

ರಾಯಪುರ: ಸ್ವಂತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಪಾತ ಮಾಡಿಸಿ, ತದನಂತರ ಜನಿಸಿದ ನವಜಾತ ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಹೀನ ಕೃತ್ಯ ಛತ್ತೀಸ್‌ಗಢದ ರಾಯಪುರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆ ಹಾಗೂ ವೈದ್ಯ ಸೇರಿ ಒಟ್ಟು ಆರು ಜನ ಆರೋಪಿಗಳನ್ನು ನ್ಯೂ ರಾಜೇಂದ್ರ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿಯ ಪ್ರಕಾರ, 16 ವರ್ಷದ ಅಪ್ರಾಪ್ತ ಮಗಳ ಮೇಲೆ ಆಕೆಯ ತಂದೆ ಸಂಬಂಧಿಕರ ಮನೆಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿದ್ದಲ್ಲದೆ, ವಿಷಯವನ್ನು ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ದೌರ್ಜನ್ಯದಿಂದಾಗಿ ಹುಡುಗಿ ಮೊದಲ ಬಾರಿಗೆ ಗರ್ಭಿಣಿಯಾದಾಗ, ಆಕೆಯ ಅತ್ತೆಯ ನೆರವಿನಿಂದ ಗರ್ಭಪಾತದ ಮಾತ್ರೆಗಳನ್ನು ನೀಡಿ ಬಲವಂತವಾಗಿ ಗರ್ಭಪಾತ ಮಾಡಿಸಲಾಗಿತ್ತು.

ಬೆದರಿಕೆಗೆ ಹೆದರಿದ್ದ ಸಂತ್ರಸ್ತೆ 2025 ರಲ್ಲಿ ಮತ್ತೆ ಗರ್ಭಿಣಿಯಾದಾಗ, ಆರೋಪಿ ತಂದೆ ಆಕೆಯನ್ನು ಪರಿಚಯಸ್ಥರ ಮನೆಯಲ್ಲಿ ಅಡಗಿಸಿಟ್ಟಿದ್ದ. ಆಕೆಯ ವಯಸ್ಸನ್ನು ಮರೆಮಾಚಿ, ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಆಕೆಗೆ ಮದುವೆಯಾಗಿದೆ ಎಂದು ಬಿಂಬಿಸಿ ರಾಯಪುರದ ವಾಸುದೇವ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಮಗುವಿಗೆ ಜನ್ಮ ನೀಡಿದ ನಂತರ, ವೈದ್ಯರು ಮತ್ತು ಇತರ ಆರೋಪಿಗಳ ನೆರವಿನಿಂದ ನವಜಾತ ಗಂಡು ಮಗುವನ್ನು ಬೇರೊಬ್ಬರಿಗೆ ಹಸ್ತಾಂತರಿಸಲಾಗಿತ್ತು.

ಸಂತ್ರಸ್ತೆ ನೀಡಿದ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆ (BNS), ಪೋಕ್ಸೋ (POCSO) ಕಾಯ್ದೆ ಹಾಗೂ ಬಾಲನ್ಯಾಯ (JJ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತಂದೆ ಸೇರಿದಂತೆ ಆರು ಮಂದಿಯನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles