Home ದಾವಣಗೆರೆ ಕಾಂಗ್ರೆಸ್ ಭ್ರಷ್ಟಾಚಾರ, ಜನವಿರೋಧಿ ನೀತಿ ಮರೆಮಾಚಲು ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ರಿಂದ ಆರ್ ಎಸ್ಎಸ್ ಜಪ: ರಾಜನಹಳ್ಳಿ ಶಿವಕುಮಾರ್ ಆಕ್ರೋಶ
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ಕಾಂಗ್ರೆಸ್ ಭ್ರಷ್ಟಾಚಾರ, ಜನವಿರೋಧಿ ನೀತಿ ಮರೆಮಾಚಲು ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ರಿಂದ ಆರ್ ಎಸ್ಎಸ್ ಜಪ: ರಾಜನಹಳ್ಳಿ ಶಿವಕುಮಾರ್ ಆಕ್ರೋಶ

Share
ಪ್ರಿಯಾಂಕ್ ಖರ್ಗೆ
Share

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಜಪ ಬಿಟ್ಟರೆ ಅಭಿವೃದ್ಧಿ ಕಾರ್ಯಗಳೇ ಆಗುತ್ತಿಲ್ಲ. ಈ ನಡುವೆ ಕ್ಷೇತ್ರದ ಜನರ ಹಿತ ಕಾಪಾಡಬೇಕಾದ ಕಾಂಗ್ರೆಸ್ ಶಾಸಕರು ಅಧಿಕಾರದ ಅಮಲಿಗೆ ಬಿದ್ದು ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿಗಳ ಮರೆಮಾಚಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಆರ್ ಎಸ್ ಎಸ್ ಜಪ ಮಾಡುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಮೇಲೆ ಸಚಿವರ ಖಾತೆ ಖ್ಯಾತೆ ಶುರುವಾಗಿದೆ. ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಮುನಿಯಪ್ಪ ಸೇರಿದಂತೆ ಹಿರಿಯ ನಾಯಕರೇ ಬಹಿರಂಗವಾಗಿ ಬಂಡಾಯವೆದ್ದಿದ್ದರು. ನಾಲ್ಕು ಬಾರಿಗೂ ಹೆಚ್ಚು ಶಾಸಕರಾದವರು ಜನರ ಕಾಳಜಿಗಿಂತ  ಅಧಿಕಾರಕ್ಕಾಗಿ ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಗಿಂತ ಅಧಿಕಾರವೇ
ಹೆಚ್ಚಾಗಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ ಎಂದು ತಿಳಿಸಿದ್ದಾರೆ.

ಆರ್ ಎಸ್ ಎಸ್ ಬಗ್ಗೆ ಮಾತನಾಡಿ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಗೃಹ ಖಾತೆ ಪ್ರಿಯಾಂಕ್ ಖರ್ಗೆಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿ. ಕೆ. ಹರಿಪ್ರಸಾದ್ ಅವರಿಗೆ ನೀಡಲಾಗಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಹಿಂದೂ ವಿರೋಧಿ
ಸರ್ಕಾರ ಎಂದೇ ಕರೆಯಲ್ಪಡುವ ಕಾಂಗ್ರೆಸ್ ಸರ್ಕಾರವು ಕುಡಿಯುವ ನೀರಿನ ಸಮಸ್ಯೆ, ಹಾಳಾಗಿರುವ ಸರ್ಕಾರಿ ಶಾಲೆಗಳ ದುರಸ್ತಿ, ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿ, ರೈತರ ಸಂಕಷ್ಟಗಳನ್ನು ಪರಿಹರಿಸುವುದನ್ನು ಬಿಟ್ಟು ಆರ್ ಎಸ್ ಎಸ್ ವಿರುದ್ಧ ಮಾತನಾಡುವ ಪ್ರಿಯಾಂಕ್ ಖರ್ಗೆ ಮತ್ತು ಬಿ. ಕೆ. ಹರಿಪ್ರಸಾದ್ ಅವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ತಂದೆ ಮಲ್ಲಿಕಾರ್ಜುನ್ ಖರ್ಗೆ ಅವರೇ ಗೃಹ ಸಚಿವರಾಗಿದ್ದರೂ ಆರ್ ಎಸ್ ಎಸ್ ಅನ್ನು ಏನೂ ಮಾಡಲಾಗಲಿಲ್ಲ. ಜವಾಹರ ಲಾಲ್ ನೆಹರು, ಇಂದಿರಾಗಾಂಧಿ ಅವರಂಥ ನಾಯಕರೇ ಆರ್ ಎಸ್ ಎಸ್ ಶಿಸ್ತು, ಸಂಘಟನೆ, ಹಿಂದುತ್ವಕ್ಕಾಗಿನ ಹೋರಾಟ, ಪ್ರಕೃತಿ ವಿಕೋಪದ ವೇಳೆ ಸಹಾಯಕ್ಕೆ ಧಾವಿಸುವುದೂ ಸೇರಿದಂತೆ ಎಲ್ಲಾ ಕಾರ್ಯಚಟುವಟಿಕೆಗಳನ್ನು ಮೆಚ್ಚಿಕೊಂಡಿದ್ದಾರೆ. ಕಾಂಗ್ರೆಸ್ ಎಷ್ಟೋ ಶಾಸಕರು ಈಗಲೂ ಆರ್ ಎಸ್ ಎಸ್ ತತ್ವ, ಸಿದ್ಧಾಂತ ಒಪ್ಪುತ್ತಾರೆ. ಸಿಎಂ ಡಿ. ಕೆ. ಶಿವಕುಮಾರ್ ಅವರೇ “ನಮಸ್ತೇ ಸದಾ ವತ್ಸಲೆ” ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಧಿಕೃತ ಪ್ರಾರ್ಥನೆಯನ್ನು ವಿಧಾನಸಭೆ ಮತ್ತು ಹೊರಗಡೆ ಹೇಳಿದ್ದಾರೆ. ಇಷ್ಟೊಂದು ಪಾವಿತ್ರ್ಯತೆ, ಮಹತ್ವ, ಇತಿಹಾಸ ಹೊಂದಿರುವ ಆರ್ ಎಸ್ ಎಸ್ ಬಗ್ಗೆ ಲಘುವಾಗಿ, ವಿನಾಕಾರಣ ಆರೋಪ ಮಾಡುವುದನ್ನು ಪ್ರಿಯಾಂಕ್ ಖರ್ಗೆ ಮತ್ತು ಬಿ. ಕೆ. ಹರಿಪ್ರಸಾದ್ ಬಿಡದಿದ್ದರೆ ಜನತೆ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ದಿನ ದೂರವಿಲ್ಲವೆಂದು ರಾಜನಹಳ್ಳಿ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles