ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್‌ಕೋಟ್ ಗೇಮ್ ಝೋನ್‌ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 28ಕ್ಕೆ ಏರಿಕೆ

On: May 26, 2024 11:43 AM
Follow Us:
---Advertisement---

ರಾಜ್‌ಕೋಟ್: ಗುಜರಾತ್ ರಾಜ್‌ಕೋಟ್‌ನ ಗೇಮ್ ಝೋನ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 28 ಕ್ಕೆ ಏರಿಕೆಯಾಗಿದ್ದು, ವೆಲ್ಡಿಂಗ್ ವೇಳೆ ಬಿದ್ದ ಕಿಡಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ದುರಂತದಲ್ಲಿ ಮೃತರು ಸುಟ್ಟು ಕರಕಲಾಗಿದ್ದಾರೆ. ಗೇಮ್ ಝೋನ್‌ನಲ್ಲಿ ಅಳವಡಿಸಲಾಗಿದ್ದ ಡಿವಿಆರ್ ಅನ್ನು ಕ್ರೈಮ್ ಬ್ರಾಂಚ್ ವಶಕ್ಕೆ ಪಡೆದುಕೊಂಡಿದೆ. ಕೇವಲ 30 ಸೆಕೆಂಡ್‌ಗಳಲ್ಲಿ ಗೇಮ್ ಝೋನ್ ನಾದ್ಯಂತ ಬೆಂಕಿ ವ್ಯಾಪಿಸಿದೆ. ಆಟದ ವಲಯದ ಹಲವೆಡೆ ದುರಸ್ತಿ ಮತ್ತು ನವೀಕರಣ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದೆ.

ಇನ್ನು ಈ ದುರಂತ ಸಂಭವಿಸಿದ ವೇಳೆ ಸ್ಥಳದಲ್ಲಿ ನಿರ್ದಿಷ್ಟವಾಗಿ ಎಷ್ಟು ಮಂದಿ ಇದ್ದರು ಎಂದು ತಿಳಿದುಬಂದಿಲ್ಲ. ಹಾಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ದೊರೆತ ಮೃತದೇಹಗಳು ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದು, ಮೃತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ಗುಜರಾತ್‌ನ ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಹಾಗೂ ರಾಜ್‌ಕೋಟ್‌ನ ಎಲ್ಲಾ ಆಟದ ವಲಯಗಳನ್ನು ತಕ್ಷಣವೇ ಮುಚ್ಚುವಂತೆ ಆದೇಶ ಹೊರಡಿಸಿದ್ದು, ತನಿಖೆಯ ಬಳಿಕವೇ ತೆರೆಯುವಂತೆ ಸೂಚಿಸಲಾಗಿದೆ.

Join WhatsApp

Join Now

Join Telegram

Join Now

Leave a Comment