ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ: ಯೋಧ ಸಾವು

On: June 19, 2024 11:12 AM
Follow Us:
---Advertisement---

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಗುಂಡಿಗೆ ಬಲಿಯಾದ ಯೋಧ ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(೨೫) ಎಂದು ತಿಳಿದು ಬಂದಿದೆ.

ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಯೋಧನ ಸಾವು ಅಯೋಧ್ಯೆ ದೇಗುಲ ಸಂಕೀರ್ಣದಲ್ಲಿ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಐಜಿ ಮತ್ತು ಎಸ್‌ಪಿ ಆಗಮಿಸಿ ಪರಿಶೀಲನೆ ನಡೆಸಿದರು. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ.ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ. ಶತ್ರುಘ್ನ ವಿಶ್ವಕರ್ಮ 2019 ರ ಬ್ಯಾಚ್‌ನವರು. ಅವರು ಅಂಬೇಡ್ಕರ್ ನಗರದ ಸಮ್ಮನಪುರ ಪೊಲೀಸ್ ಠಾಣೆಯ ಕಾಜಪುರ ಗ್ರಾಮದ ನಿವಾಸಿಯಾಗಿದ್ದರು. SSF ನಲ್ಲಿ ಪೋಸ್ಟ್ ಮಾಡಲಾಗಿದೆ.

ದೇವಸ್ಥಾನದ ಭದ್ರತೆಗಾಗಿ ಯೋಗಿ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಎಸ್‌ಎಸ್‌ಎಫ್ ಪಡೆಯನ್ನು ರಚಿಸಿತ್ತು. ಘಟನೆಗೂ ಮುನ್ನ ಶತ್ರುಘ್ನ ಮೊಬೈಲ್ ನೋಡುತ್ತಿದ್ದ ಎಂದು ಮೃತ ಯೋಧನ ಸಹೋದ್ಯೋಗಿಗಳು ತಿಳಿಸಿದ್ದಾರೆ.ಅವರು ಕೆಲವು ದಿನಗಳಿಂದ ಯಾವುದೋ ಚಿಂತೆಯಲ್ಲಿದ್ದರು ಎಂಬುದಾಗಿ ತಿಳಿಸಿದ್ದಾರೆ, ಪೊಲೀಸರು ಅವರ ಮೊಬೈಲ್ ಅನ್ನು ಕೂಡ ವಿಚಾರಣೆಗೆ ಕಳುಹಿಸಿದ್ದಾರೆ. ಮೃತ ಯೋಧನ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ.

 

Join WhatsApp

Join Now

Join Telegram

Join Now

Leave a Comment