Site icon Kannada News-suddikshana

ಉದ್ಯಮಿ ಜೊತೆ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಮದುವೆ!

ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಇದೇ ನವೆಂಬರ್ ತಿಂಗಳಲ್ಲಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಸಖತ್ ಸದ್ದು ಮಾಡುತ್ತಿದೆ. ಉದ್ಯಮಿಯನ್ನು ನಟಿ ಮದುವೆಯಾಗುತ್ತಿದ್ದು ಅದಕ್ಕಾಗಿ ಭರ್ಜರಿ ತಯಾರಿ ನಡೆಸಲಾಗುತ್ತಿದೆ ಎಂಬ  ಸುದ್ದಿಕೇಳಿ ಬರ್ತಿದೆ.

ಈ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ರಾಜಸ್ಥಾನ ಮೂಲದ ಟೆಕ್ಸ್‌ಟೈಲ್ ಉದ್ಯಮಿ ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ ಅನ್ನೋ ವಿಚಾರ ಕೇಳಿ ಬಂದಿದೆ. ಆಪ್ತರ ಪ್ರಕಾರ ಅಕ್ಟೋಬರ್ ನಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರಂತೆ. ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ. ರಾಜಸ್ಥಾನದಲ್ಲಿ ಆರತಕ್ಷತೆ ನಡೆಲಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಇದನ್ನು ರಮ್ಯಾ ಆಪ್ತರು ಕೂಡ ಖಚಿತ ಪಡಿಸಿದ್ದಾರೆ.

ಉದ್ಯಮಿ ಜೊತೆ ಮದುವೆ ಆಗೋದು ಪಕ್ಕಾ, ಇಂದು ಉದ್ಯಮಿ ಕುಟುಂಬದ ಕಾರ್ಯಕ್ರಮದಲ್ಲಿ ರಮ್ಯಾ ಭಾಗಿ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಇವರ ನಿಶ್ಚಿತಾರ್ಥ ನಡೆಯಲಿದೆ. ಹಾಗೂ ರಮ್ಯಾರ ಹುಟ್ಟು ಹಬ್ಬದ ದಿನದಂದೇ (ನ.29) ಈ ಜೋಡಿ ಹೊಸ ಬದುಕಿಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಮ್ಯಾ, ಇದೊಂದು ರೂಮರ್ಸ್ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ. ಹಲವಾರು ಬಾರಿಯೂ ಮದುವೆ ಸುದ್ದಿ ಬಂದಾಗ ಅದನ್ನು ರಮ್ಯಾ ಅಲ್ಲಗಳೆಯುತ್ತಲೇ ಬಂದಿದ್ದಾರೆ. ಎಂದಿನಂತೆ ಈ ಬಾರಿಯೂ ಅದನ್ನೇ ಮಾಡಿದ್ದಾರೆ. ಆದರೆ ಇದು ರಿಯಲ್ ಎಂಬ ನಟಿಯ ಆಪ್ತರೆ ಹೇಳಿದ್ದಾರೆ.

Exit mobile version