SUDDIKSHANA KANNADA NEWS/ DAVANAGERE/ DATE:07-10-2024
ನವದೆಹಲಿ: ಖ್ಯಾತ ಉದ್ಯಮಿ ರತನ್ ಟಾಟಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ 86 ವರ್ಷ ವಯಸ್ಸಿನ ರತನ್ ಟಾಟಾ ಅವರಿಗೆ ರಕ್ತದೊತ್ತಡದಲ್ಲಿ ಗಮನಾರ್ಹ ಕುಸಿತ ಆಗಿದೆ.ಸೋಮವಾರ ಮುಂಜಾನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು.
ಅವರು ಗಂಭೀರ ಸ್ಥಿತಿಯಲ್ಲಿದ್ದು, ಪ್ರಸ್ತುತ ಹೃದ್ರೋಗ ತಜ್ಞ ಡಾ. ಶಾರುಖ್ ಆಸ್ಪಿ ಗೋಲ್ವಾಲ್ಲಾ ನೇತೃತ್ವದ ವಿಶೇಷ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ಅವರ ಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.