SUDDIKSHANA KANNADA NEWS/ DAVANAGERE/ DATE:02-12-2024
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ ವರದಿಗಳ ಪ್ರಕಾರ ಕಳೆದ ವರ್ಷ ನುರಿಸಲಾದ ಕಬ್ಬಿನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿ ಆಧಾರದ ಮೇಲೆ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ರೂ.3151/- ಗಳ ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.