(RATION- CARD) ರಾಜ್ಯದಲ್ಲಿನ ಬಡ ಕುಟುಂಬದವರಿಗೆ ಸರ್ಕಾರ ಹಲವು ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಪಡಿತರ ಚೀಟಿ ವಿಚಾರಣೆ ಕೂಡ ಒಂದಾಗಿದೆಯೇ ಅನ್ನಬಹುದು. ಈಗಾಗಲೇ ರೇಷನ್ ಕಾರ್ಡ್ಗಾಗಿ ಹಲವು ಜನ ಕಾಯುತ್ತಿದ್ದು, ಆದರೆ, ರೇಷನ್ ಕಾರ್ಡ್ ಅನ್ನು ರದ್ದುಪಡಿಸುವ ಕುರಿತು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.
ಹೌದು, ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, ಯಾರು ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅಂತವರನ್ನು ಪತ್ತೆ ಹಚ್ಚಿ ಕಾರ್ಡ್ ರದ್ದು ಮಾಡುವಂತೆ ಅಧಿಕಾರಿಗಳಿಗೆ ಸರ್ಕಾರ ಆದೇಶ ನೀಡಿದೆ.
ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.