(ration-card-Correction:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅಲ್ಲದೆ ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಹೀಗಾಗಿ ಹಲವು ಜನ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗಾಗಿ ಕಾಯುತ್ತಿದ್ದರು. ಇದೀಗ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಹೌದು, ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 10 ರವರೆಗೆ ಅವಕಾಶ ನೀಡಲಾಗಿದೆ.
ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಆಗಸ್ಟ್ 10 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್ ಗಳಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ತಿದ್ದುಪಡಿಗೆ ಯಾವುದೆಲ್ಲಾ ದಾಖಲೆಗಳು ಬೇಕಾಗುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
- ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
- ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ.
- ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
- ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್ಆರ್ ಸಂಖ್ಯೆ ಮತ್ತು ಲೋಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.