SUDDIKSHANA KANNADA NEWS/ DAVANAGERE/ DATE:20-09-2024
ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹೊನ್ನಾಳಿ ತಾಲ್ಲೂಕಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ.
ಎಪಿಎಲ್ ಸದಸ್ಯರ ಪಡಿತರ ಚೀಟಿಗೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆ.ಜಿ ಗೆ 15 ರೂ.ಗಳ ದರದಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಹೊನ್ನಾಳಿ ತಾಲ್ಲೂಕು ತಹಶೀಲ್ದಾರ್ ಸೂಚಿಸಿದ್ದಾರೆ.