SUDDIKSHANA KANNADA NEWS/ DAVANAGERE/ DATE-04-06-2025
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್‌ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್‌ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್‌ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್‌ಬಾಕ್ಸ್‌ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್‌ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್‌ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್‌ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು