Site icon Kannada News-suddikshana

ಮಾ. 13ಕ್ಕೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ

SUDDIKSHANA KANNADA NEWS/ DAVANAGERE/ DATE:08-03-2024

ದಾವಣಗೆರೆ: ದಾವಣಗೆರೆ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ದಾವಣಗೆರೆ ನಗರದ ಪ್ರವಾಸಿ ಮಂದಿರದಲ್ಲಿ ಮಾ.13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸುವರು.

ಸಾರ್ವಜನಿಕರು ಸರ್ಕಾರದ ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಇತ್ಯರ್ಥ ಮಾಡದೇ ಬಗ್ಗೆ ಬಾಕಿ ಇಟ್ಟಿರುವ ಬಗ್ಗೆ ತಮ್ಮ ದೂರು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ
ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

Exit mobile version