ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕುರುಬರಿಗೆ ಎಸ್ಟಿ ಮೀಸಲಾತಿಗೆ ಈಶ್ವರಪ್ಪ ಹೋರಾಟ, ಬಿಜೆಪಿ ಸರ್ಕಾರದವರಿಂದ ಕೇಂದ್ರಕ್ಕೆ ಶಿಫಾರಸು: ಸಿಎಂ ಸಿದ್ದರಾಮಯ್ಯ!

On: October 7, 2025 2:19 PM
Follow Us:
ಸಿದ್ದರಾಮಯ್ಯ
---Advertisement---

ಬೆಂಗಳೂರು: ಈಗ ಕುರುಬರನ್ನು ST ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

READ ALSO THIS STORY: STಗೆ ಕುರುಬರನ್ನು ಸೇರಿಸಿದರೆ STಮೀಸಲಾತಿ ಪ್ರಮಾಣ ಹೆಚ್ಚಾಗಬೇಕು, ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು: ಸಿಎಂ ಸಿದ್ದರಾಮಯ್ಯ ಸ್ಪಷ್ಟ ನುಡಿ!

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು. ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ST ಗೆ ಸೇರಿಸಿದರು. ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು.‌ ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ಪಾಕಿಸ್ತಾನ

ಪಾಕಿಸ್ತಾನ ಕದನ ವಿರಾಮ ತಿರಸ್ಕರಿಸಿ ಮರ್ಮಾಘಾತ ನೀಡಿದ ಅಫ್ಘಾನಿಸ್ತಾನ: ರಕ್ಷಣಾ ಸಚಿವ, ಐಎಸ್‌ಐ ಮುಖ್ಯಸ್ಥರಿಗೆ ವೀಸಾ ನಿರಾಕರಣೆ!

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

ರೈಲ್ವೆ

ರೈಲ್ವೆ ನೇಮಕಾತಿ ಮಂಡಳಿಯ ಜೂನಿಯರ್ ಎಂಜಿನಿಯರ್ ನೇಮಕ: 2570 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಸಬ್-ಇನ್ಸ್‌ಪೆಕ್ಟರ್

ಭರ್ಜರಿ ಉದ್ಯೋಗಾವಕಾಶ: SSC CPO ಸಬ್-ಇನ್ಸ್‌ಪೆಕ್ಟರ್ 2861 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Leave a Comment