SUDDIKSHANA KANNADA NEWS/ DAVANAGERE/ DATE:21-11-2024
ಬೆಂಗಳೂರು: ಲೈನ್ ಮ್ಯಾನ್ ಉದ್ಯೋಗ ಎದುರು ನೋಡುತ್ತಿದ್ದೀರಾ. ಹಾಗಿದ್ರೆ ಗುಡ್ ನ್ಯೂಸ್.
ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್ಮ್ಯಾನ್ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದೆ. ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ.
ಹಿಂದೆ ಲೈನ್ಮ್ಯಾನ್ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ, ಇಂತಹ ಸಮಸ್ಯೆಗಳು ತಲೆದೋರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಈ ಮೂಲಕ ಲೈನ್ ಮ್ಯಾನ್ ಗಳ ಕೊರತೆ ನೀಗಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಅರ್ಜಿ ಸಲ್ಲಿಸುವವರಿಗೆ ಸದ್ಯದಲ್ಲಿಯೇ ಮಾಹಿತಿ ಸಿಗಲಿದೆ. ಸರ್ಕಾರದ ಈ ನಿರ್ಧಾರ ಉದ್ಯೋಗ ಆಕಾಂಕ್ಷಿಗಳಿಗೆ ಸಂತಸ ತಂದಿದೆ.