SUDDIKSHANA KANNADA NEWS/ DAVANAGERE/ DATE:18-02-2025
ದಾವಣಗೆರೆ: ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್ಸೈಟ್ www.indiapostgdsonline.gov.inನಲ್ಲಿ ಮಾರ್ಚ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ, ಇಂಗ್ಲೀಷ್ ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.
18 ರಿಂದ 40 ವರ್ಷ ವಯೋಮಾನದವರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಯಾವುದೇ ಅಂಚೆ ಕಚೇರಿಯನ್ನು ಅಥವಾ ಮೇಲೆ ತಿಳಿಸಿದ ವೆಬ್ಸೈಟ್ ಲಿಂಕ್ನ್ನು ಸಂಪರ್ಕಿಸಲು ಅಂಚೆ ಅಧೀಕ್ಷರು ತಿಳಿಸಿದ್ದಾರೆ.