SUDDIKSHANA KANNADA NEWS/ DAVANAGERE/ DATE:02-04-202
ಬೆಂಗಳೂರು: ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.
ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಸೂಚನೆ ನೀಡಿದರು.
ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.