Home ಕ್ರೈಂ ನ್ಯೂಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪರಿಗೆ ನಿಲ್ಲದ ಸಂಕಷ್ಟಗಳ ಸರಮಾಲೆ: ಮತ್ತೆ ಹಿನ್ನೆಡೆ, ಸದ್ಯಕ್ಕೆ ಹೊರಬರೋದು ಡೌಟು!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರುಸಿನಿಮಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪರಿಗೆ ನಿಲ್ಲದ ಸಂಕಷ್ಟಗಳ ಸರಮಾಲೆ: ಮತ್ತೆ ಹಿನ್ನೆಡೆ, ಸದ್ಯಕ್ಕೆ ಹೊರಬರೋದು ಡೌಟು!

Share
ದರ್ಶನ್ ತೂಗುದೀಪ
Share

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ ತೂಗುದೀಪ ಅವರಿಗೆ ಹೈಕೋರ್ಟ್‌ನಲ್ಲಿ ಮತ್ತೊಂದು ಭಾರಿ ಹಿನ್ನಡೆಯಾಗಿದೆ. ಸಹ-ಆರೋಪಿ ಪ್ರದೋಶ್ ರಾವ್ (ಎ-14) ಸರ್ಕಾರಿ ಅಭಯಯಾಚಕ (ಅಪ್ರೂವರ್) ಆಗಲು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ತನಗೆ ಅವಕಾಶ ನೀಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಆಗಸ್ಟ್ 10 ರಂದು 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸಷನ್ಸ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಸಿಆರ್‌ಪಿಸಿ ಕಾಯ್ದೆ ಸೆಕ್ಷನ್ 306ರ ಅಡಿಯಲ್ಲಿ ಇನ್ನೊಬ್ಬ ಆರೋಪಿ ಅಪ್ರೂವರ್ ಆಗುವ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಲು ಅಥವಾ ಆಕ್ಷೇಪಣೆ ಎತ್ತಲು ಸಹ-ಆರೋಪಿಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿದೆ.

ಪೂರ್ವನಿದರ್ಶನಗಳನ್ನು ಉಲ್ಲೇಖಿಸಿದ ಹೈಕೋರ್ಟ್, ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಎತ್ತಿಹಿಡಿದ ತೀರ್ಪು ಈ ಪ್ರಕರಣಕ್ಕೂ ಅನ್ವಯಿಸುತ್ತದೆ ಎಂದು ತಿಳಿಸಿದೆ. ಇದರೊಂದಿಗೆ ಜೈಲಿನಲ್ಲಿರುವ ದರ್ಶನ್‌ಗೆ ಯಾವುದೇ ರೀತಿಯ ವಿಶೇಷ ಸೌಲಭ್ಯಗಳನ್ನು ನೀಡಬಾರದು ಎಂದೂ ನ್ಯಾಯಾಲಯ ಸೂಚನೆ ನೀಡಿದೆ.

Share

Leave a comment

Leave a Reply

Your email address will not be published. Required fields are marked *