Site icon Kannada News-suddikshana

ʻರೇವ್‌ ಪಾರ್ಟಿʼ ಕೇಸ್‌ : ತೆಲುಗು ನಟಿ ಹೇಮಾಗೆ CCBಯಿಂದ ನೋಟಿಸ್ ಜಾರಿ

ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ತಾವು ಹೈದರಾಬಾದ್‍ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು. ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.

ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿತ್ತು. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಹೇಳಿದ್ದರು. ಈ ನಜುವೆ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು. 73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು.

Exit mobile version