ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಕುಟಂಬ ಭೇಟಿ ನೀಡಿದೆ. ಕಾಂತಾರ ಹೀರೋ ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ್ದಾರೆ. ಕುಟುಂಬ ಸಮೇತ ಶೃಂಗೇರಿ ಶಾರದಾಂಬೆ ದರ್ಶನ ಪಡೆದು ರಿಷಬ್ ಶೆಟ್ಟಿ ಅವರು ದೇವಿ ಆಶೀರ್ವಾದ ಪಡೆದಿದ್ದಾರೆ. ಶ್ರೀ ಶಾರದಾಂಬೆಯ ಸನ್ನಿಧಿಯಲ್ಲಿ ನಮ್ಮ ಪುಟ್ಟ ರಾಧ್ಯಾಳ ಅಕ್ಷರ ಅಭ್ಯಾಸದ ಕ್ಷಣ ಎಂದು ನಟ ರಿಷಬ್ ಶೆಟ್ಟಿ ಟ್ವಿಟ್ಟರ್ ನಲ್ಲಿ ಖುಷಿ ಹಂಚಿಕೊಂಡಿದ್ದಾರೆ.
ಪುಟ್ಟ ಹೆಜ್ಜೆಗಳಿಂದ ಪುಟ್ಟ ಪದಗಳವರೆಗೆ, ಶ್ರೀ ಶಾರದಾಂಬೆಯ ಕೃಪೆಯಿಂದ ನಮ್ಮ ಪುಟ್ಟ ಬಾಲಕಿಯ ‘ಅಕ್ಷರ ಅಭ್ಯಾಸ’ ಸಮಾರಂಭ ನೆರವೇರಿತು ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಈ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಪುಣ್ಯವಂತರು ಎಂದು ರಿಷಬ್ ಶೆಟ್ಟಿ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. ಶೃಂಗೇರಿ ಶಾರದಾಪೀಠವು 8 ನೇ ಶತಮಾನದಲ್ಲಿ ಅದ್ವೈತ ವೇದಾಂತದ ಪ್ರತಿಪಾದಕರಾದ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪ್ರಮುಖ ಮಠಗಳಲ್ಲಿ ಮೊದಲನೆಯದು. ಇದನ್ನು ದಕ್ಷಿಣಾಮ್ನಾಯ ಪೀಠವೆನ್ನುತಾರೆ.
ನವರಾತ್ರಿಯ ಸಂದರ್ಭದಲ್ಲಿ ಶಾರದಾ ದೇವಿಗೆ ಚಂಡಿಕಾ ಹವನ, ರಥೋತ್ಸವ, ಕುಂಕುಮಾರ್ಚನೆ, ಚಿನ್ನರಥ ಸೇವೆ ಮುಂತಾದ ಸೇವೆಗಳು ನಡೆಯುತ್ತವೆ. ಇಲ್ಲಿ ಹೆಚ್ಚಿನ ಜನರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುತ್ತಾರೆ.