ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿಗಳು (RRB) ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 3,548 ಗೂಡ್ಸ್ ಟ್ರೈನ್ ಮ್ಯಾನೇಜರ್ (Goods Train Manager), ಸೀನಿಯರ್ ಕ್ಲರ್ಕ್, ಟೈಪಿಸ್ಟ್ ಹಾಗೂ ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದೇಶದಾದ್ಯಂತ ಕೇಂದ್ರ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಪದವೀಧರ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಚಾಲನೆಯಲ್ಲಿದ್ದು, ನವೆಂಬರ್ 6, 2026 ರವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು RRB ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: ಒಟ್ಟು 3,548 ಹುದ್ದೆಗಳಲ್ಲಿ 2,750 ಗೂಡ್ಸ್ ಟ್ರೈನ್ ಮ್ಯಾನೇಜರ್, 371 ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, 300 ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಹಾಗೂ 127 ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್‌ವೈಸರ್ ಹುದ್ದೆಗಳು ಸೇರಿವೆ.
ವಿದ್ಯಾರ್ಹತೆ ಮತ್ತು ವಯೋಮಿತಿ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪೂರ್ಣಗೊಳಿಸಿರಬೇಕು. ಕನಿಷ್ಠ 18 ರಿಂದ ಗರಿಷ್ಠ 33 ವರ್ಷ ವಯೋಮಿತಿಯಿದ್ದು, ಒಬಿಸಿ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಸಡಿಲಿಕೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು: ನವೆಂಬರ್ 6, 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,200 ರಿಂದ ರೂ. 35,400 ರವರೆಗೆ ವೇತನ ದೊರೆಯಲಿದೆ.
ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನ ಆರಂಭಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಮಟ್ಟ ಕಾಯದೆ ಆದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
Official Website: rrbapply.gov.in





Leave a comment