ದಾವಣಗೆರೆ/ನೆಲಮಂಗಲ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರುಡ್‌ಸೆಟ್ ಸಂಸ್ಥೆಯು ಕಂಪ್ಯೂಟರ್ ಡಿ.ಟಿ.ಪಿ (DTP) ಕುರಿತು 45 ದಿನಗಳ ಉಚಿತ ತರಬೇತಿಯನ್ನು ಆಯೋಜಿಸಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಏಪ್ರಿಲ್ 2 ರಿಂದ ತರಬೇತಿ ಆರಂಭವಾಗಲಿದ್ದು, 18 ರಿಂದ 50 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಅರ್ಜಿದಾರರು ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು ಹಾಗೂ ಕನ್ನಡ ಓದಲು-ಬರೆಯಲು ತಿಳಿದಿರಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9380162042, 9481506564 ಅಥವಾ 9481778047 ಗೆ ಸಂಪರ್ಕಿಸಲು ಸಂಸ್ಥೆಯ ನಿರ್ದೇಶಕರಾದ ರವಿಕುಮಾರ್ ಅವರು ಕೋರಿದ್ದಾರೆ.





Leave a comment