Home ದಾವಣಗೆರೆ ದರೋಡೆ ಸೇರಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ್ರೆ ಪೊಲೀಸರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಾ. ಜಿ. ಪರಮೇಶ್ವರ ಎಚ್ಚರಿಕೆ
ದಾವಣಗೆರೆಬೆಂಗಳೂರು

ದರೋಡೆ ಸೇರಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ್ರೆ ಪೊಲೀಸರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಾ. ಜಿ. ಪರಮೇಶ್ವರ ಎಚ್ಚರಿಕೆ

Share
ಜಿ. ಪರಮೇಶ್ವರ
Share

SUDDIKSHANA KANNADA NEWS/DAVANAGERE/DATE:01_12_2025

ದಾವಣಗೆರೆ: ಪೊಲೀಸರು ದರೋಡೆ ಸೇರಿದಂತೆ ಇತರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರ ಬಗ್ಗೆ ಎಫ್ಐಆರ್ ದಾಖಲಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ದರೋಡೆಯಂಥ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ.

READ ALSO THIS STORY: ಹೆಚ್ಚಿನ ಲಾಭಾಂಶದ ಆಮಿಷಕ್ಕೆ ಬಲಿಯಾದ ಮಹಿಳೆಗೆ 8.8 ಲಕ್ಷ ರೂ. ವಂಚನೆ!

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆ. ಅಶಿಸ್ತು, ಅಪರಾಧ ಕೃತ್ಯಗಳಲ್ಲಿ ಪೊಲೀಸರು ಭಾಗಿಯಾಗಿದ್ದರೆ ಸಹಿಸುವ ಪ್ರಶ್ನೆಯೇ ಇಲ್ಲ. ಕಠಿಣ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದರು.

ಮಾಲೂರಿನ ಪ್ರಕರಣ ಮತ್ತು ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಪೊಲೀಸರನ್ನು ಪೊಲೀಸ್ ಇಲಾಖೆ ಸೇವೆಯಿಂದಲೇ ವಜಾಗೊಳಿಸಲಾಗಿದೆ. ದಾವಣಗೆರೆಯಲ್ಲಿ ಚಿನ್ನದ ತಯಾರಕನ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರೊಬೆಷನರಿ ಪಿಎಸ್ಐ ಅನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಮತ್ತೊಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ವರದಿ ಬಂದ ಬಳಿಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ದರೋಡೆಯಂಥ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ತಕ್ಷಣವೇ ವಜಾಗೊಳಿಸಲಾಗುತ್ತದೆ. ಇದರಲ್ಲಿ ಎರಡು ಮಾತಿಲ್ಲ. ಆ ಬಳಿಕ ತನಿಖೆ ನಡೆಸಲಾಗುತ್ತದೆ ಎಂದು ಡಾ. ಜಿ. ಪರಮೇಶ್ವರ ಮಾಹಿತಿ ನೀಡಿದರು.

Share

Leave a comment

Leave a Reply

Your email address will not be published. Required fields are marked *