SUDDIKSHANA KANNADA NEWS/ DAVANAGERE/ DATE:02-04-2025
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ 12ನೇ ಘಟಿಕೋತ್ಸವ ಸಮಾರಂಭದಲ್ಲಿ ಮೂವರಿಗೆ ಗೌರವ ಡಾಕ್ಟೂರೇಟ್ ಪ್ರದಾನ ಮಾಡಲಾಯಿತು.
ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ಕನಕ ಗುರುಪೀಠದ ಪೀಠಾಧಿಕಾರಿ ನಿರಂಜನಾನಂದಪುರಿ ಸ್ವಾಮೀಜಿ ಮತ್ತು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಎಸ್.ಆರ್.ನಿರಂಜನ್ ಅವರಿಗೆ ರಾಜ್ಯಪಾಲರಾದ ಥಾವರ್ಚಂದ್ ಗೆಹಲೋಟ್ ಗೌರವ ಡಾಕ್ಟೊರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದರು.
ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕುಲಪತಿ ಪ್ರೊ.ಬಿ.ಡಿ.ಕುಂಬಾರ, ವಿಜ್ಞಾನಿ ಪ್ರೊ.ಪಿ.ಬಲರಾಮ್, ಕುಲಸಚಿವ ಪ್ರೊ.ಆರ್.ಶಶಿಧರ ಮತ್ತಿತರರು ಹಾಜರಿದ್ದರು.