ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹೆಸರು ನಾಮಕರಣ ವಿಚಾರ: ಶಾಮನೂರು ಶಿವಶಂಕರಪ್ಪ, ಎಸ್. ಎಸ್. ಮಲ್ಲಿಕಾರ್ಜುನ್ ರಿಗೆ ಹೈಕೋರ್ಟ್ ನೊಟೀಸ್ ಕೊಟ್ಟಿದ್ಯಾಕೆ…?

On: March 13, 2024 11:15 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-03-2024

ಬೆಂಗಳೂರು: ದಾವಣಗೆರೆ ನಗರದ ವಿವಿಧೆಡೆ ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಅನೇಕ ಕಟ್ಟಡಗಳು, ಪಾರ್ಕ್, ಬಸ್ ನಿಲ್ದಾಣ, ರಸ್ತೆಗಳಿಗೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಹೆಸರು ಇಡಲಾಗಿದ್ದು, ಇದನ್ನು ತೆರವುಗೊಳಿಸಿ ಎಂದು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೊಟೀಸ್ ಜಾರಿಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.

ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡುವಂತೆ ಆದೇಶ ನೀಡಿದೆ. ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಕಟ್ಟಡ ಹಾಗೂ ಇನ್ನಿತರೆ ಸ್ಥಳಗಳಿಗೆ ಜೀವಂತ
ರಾಜಕಾರಣಿಗಳ ಹೆಸರು ನಾಮಕರಣ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಈ ಆದೇಶ ಕೊಟ್ಟಿದೆ.

ದೂರೇನು..? ಅರ್ಜಿಯಲ್ಲಿ ಏನಿತ್ತು…?

ದಾವಣಗೆರೆ ಪೂನಾ – ಬೆಂಗಳೂರು ರಸ್ತೆಯಲ್ಲಿ ನಿರ್ಮಿಸಲಾಗಿರುವ ಹಳೆಯ ಬಸ್ ನಿಲ್ದಾಣಕ್ಕೆ ಶಾಮನೂರು ಶಿವಶಂಕರಪ್ಪ ಬಸ್ ಸ್ಟಾಂಡ್ ಎಂದು ಹೆಸರು ಇಡಲಾಗಿದೆ. ದಾವಣಗೆರೆ ನಗರದ ಕುಡಿಯುವ ನೀರಿಗಾಗಿ ಬಳಸಲಾಗುತ್ತಿರುವ ಮತ್ತು ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸಿ ನಿರ್ವಹಿಸಲಾಗುತ್ತಿರುವ ಕುಂದುವಾಡ ಕೆರೆಯ ಹೆಸರನ್ನು ಎಸ್. ಎಸ್. ಮಲ್ಲಿಕಾರ್ಜುನ ಸಾಗರ ಇಂದು ಇಡಲಾಗಿದೆ. ಅದೇ ರೀತಿಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಎಸ್. ಎಸ್. ಮಲ್ಲಿಕಾರ್ಜುನ ಸಭಾಂಗಣ ಎಂದು ನಾಮಕರಣ ಮಾಡಲಾಗಿದೆ.

ನಗರದಲ್ಲಿನ ಪ್ರಮುಖ ಉದ್ಯಾನವನವೊಂದಕ್ಕೆ ಡಾ. ಶಾಮನೂರು ಶಿವಶಂಕರಪ್ಪ ಎಂದು ಹೆಸರಿಡಲಾಗಿದೆ. ಹುಡ್ಕೊ ಬಡಾವಣೆಗೆ ಎಸ್ ಎಸ್ ಎಂ ನಗರ (ಡಾ. ಶಾಮನೂರು ಶಿವಶಕರಪ್ಪ ನಗರ) ಎಂದು ಹೆಸರು ಇಡಲಾಗಿದೆ. ಈ ನಾಮಾಂಕಿತಗಳು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ದಾವಣಗೆರೆ ನಗರದ ಹೊಂಡದ ರಸ್ತೆ ನಿವಾಸಿ ಹಾಗೂ ವಕೀಲ ಎ. ಸಿ. ರಾಘವೇಂದ್ರ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳಾದ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆಯನ್ನು ನಡೆಸಿತು.

ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಹೆಸರನ್ನು ತಾಲೂಕು ಕ್ರೀಡಾಂಗಣಕ್ಕೆ ನಾಮಕರಣ ಮಾಡಿದ್ದನ್ನು ಆಕ್ಷೇಪಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೈಕೋರ್ಟ್ 2012ರಲ್ಲಿ ಆದೇಶ ನೀಡಿದ್ದು, ಮಾಡಾಳ್ ವಿರೂಪಾಕ್ಷಪ್ಪ ಆಟದ ಮೈದಾನ ಎಂಬ ಬದಲಿಗೆ ತಾಲೂಕು ಆಟದ ಮೈದಾನ ಎಂದು ನಾಮಕರಣ ಮಾಡಲಾಗಿತ್ತು ಎಂಬ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತರಲಾಯಿತು. ಈ ಪ್ರಕರಣದ ವಾದ ಆಲಿಸಿದ ನ್ಯಾಯಪೀಠವು, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ದಾವಣಗೆರೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯಿತಿ ಸಿಇಒ ಸೇರಿದಂತೆ ಪ್ರಕರಣದ ಎಲ್ಲಾ ಪ್ರತಿವಾದಿಗಳಿಗೆ ನೊಟೀಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment