SUDDIKSHANA KANNADA NEWS/ DAVANAGERE/ DATE:11-12-2024
ಮಂಡ್ಯ: ಮದ್ದೂರಿನ ಸೋಮನಹಳ್ಳಿಯಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್, ಸಂಪುಟ ಸಚಿವರು, ಶಾಸಕರು ಈ ವೇಳೆ ಉಪಸ್ಥಿತರಿದ್ದರು.
ಕಾವೇರಿ ತೀರದ ಕನಸುಗಾರನಿಗೆ ಅಂತಿಮ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಡಿದ ಡಿ. ಕೆ. ಶಿವಕುಮಾರ್ ಅವರು ಎಸ್. ಎಂ. ಕೃಷ್ಣ ಅವರು ನನ್ನ ತಂದೆ ಸಮಾನರು, ನನ್ನ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ದೈಹಿಕವಾಗಿ ಇಲ್ಲವಾದರೂ ಸದಾ ಒಳ್ಳೆಯದನ್ನು ಬಯಸುವವರ ಹೃದಯದಲ್ಲಿ ಜೀವಂತವಾಗಿರುತ್ತಾರೆ ಎಂದು ಹೇಳಿದರು. ಮಾತ್ರವಲ್ಲ, ಎಸ್. ಎಂ. ಕೃಷ್ಣರ ದರ್ಶನ ಮಾಡುತ್ತಿದ್ದಂತೆ ಮತ್ತೆ ಬಿಕ್ಕಿ ಬಿಕ್ಕಿ ಅತ್ತರು.
ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರುವ ಮುನ್ನ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನವನ್ನು ಮಾಜಿ ಸಿಎಂಗಳಾದ ಬಿ. ಎಸ್. ಯಡಿಯೂರಪ್ಪ,
ಕುಮಾರಸ್ವಾಮಿ, ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಸೇರಿದಂತೆ ಲಕ್ಷಾಂತರ ಜನರು ಕಂಬನಿ ಮಿಡಿದರು.
ಅಜಾತಶತ್ರುವಿನ ಅಂತಿಮಯಾತ್ರೆ!
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನವು ಮದ್ದೂರಿಗೆ ತೆರಳುವ ವೇಳೆ ಚನ್ನಪಟ್ಟಣದಲ್ಲಿ ಅಪಾರ ಸಂಖ್ಯೆಯ ಜನರು ಅವರ ಅಂತಿಮ ದರ್ಶನ ಪಡೆದರು.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನವು ಮದ್ದೂರಿಗೆ ತೆರಳುವ ವೇಳೆ ರಾಮನಗರದ ಯೂನಿವರ್ಸಲ್ ಪಬ್ಲಿಕ್ ಶಾಲೆ ಮತ್ತು ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಅಪಾರ ಸಂಖ್ಯೆಯ ಜನರು ಅವರ ಅಂತಿಮ ದರ್ಶನ ಪಡೆದರು. ಕಣ್ಣೀರು ಸುರಿಸಿದರು.
ಇನ್ನು ಸಿಎಂ ಸಿದ್ದರಾಮಯ್ಯರೂ ಪಾಲ್ಗೊಂಡರು. ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಅಜಾತಶತ್ರುವಿಗೆ ಅಂತಿಮ ನಮನ ಸಲ್ಲಿಸಿದರು.