SUDDIKSHANA KANNADA NEWS/ DAVANAGERE/ DATE:15-08-2024
ದಾವಣಗೆರೆ: ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಕಾಂಗ್ರೆಸ್ ಪಕ್ಷ ಸೇರುತ್ತಾರೆಂದು ನಾನು ಹೇಳಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸ್ಫಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸಚಿವರ ಕಛೇರಿಯಿಂದ ಸ್ಪಷ್ಟನೆ ನೀಡುತ್ತಿದ್ದು, ಮಾಧ್ಯಮ ಮಿತ್ರರು ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ಅಥವಾ ಕಛೇರಿಯವರೊಂದಿಗೆ ನೇರವಾಗಿ ಮಾತನಾಡಿ ವರದಿ ಪ್ರಕಟಿಸುವಂತೆ ಈ ಮೂಲಕ ತಮ್ಮಲ್ಲಿ ತಿಳಿಸಲು ಬಯಸುತ್ತೇವೆ ಎಂದಿದ್ದಾರೆ.
ಇಂದು ಬೆಳಿಗ್ಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಧ್ವಜಾರೋಹಣ ನೆರವೇರಿಸಿದ್ದರು. ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ಈ ವೇಳೆ ಕೆಲವು ಮಾಧ್ಯಮ ಮಿತ್ರರು ಸಚಿವರಿಗೆ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಹೊನ್ನಾಳ್ಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ವಿಚಾರವಾಗಿ ಮಾತನಾಡುವ ವೇಳೆ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರದ ವಿಚಾರವಾಗಿ 2-3 ಬಾರಿ ನನ್ನೊಂದಿಗೆ ಮಾತನಾಡಿರುವುದು ನಿಜ. ಆದರೆ ಅವರು ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಮಾತನಾಡಿಲ್ಲ ಎಂದು ಹೇಳಿದ್ದಾರೆ.
ನಾವೂ ರೇಣುಕಾಚಾರ್ಯ ಅವರನ್ನು ಕಾಂಗ್ರೆಸ್ ಪಕ್ಷ ಸೇರಿ ಎಂದು ಕರೆದಿಲ್ಲ ಎಂದು ಹೇಳಿದ್ದು, ಕೆಲವು ಮಾಧ್ಯಮಗಳು ತಪ್ಪಾಗಿ ಈ ಬಗ್ಗೆ ವರದಿ ಪ್ರಕಟಿಸಲಿ ಎಂದು ತಿಳಿಸಿದ್ದಾರೆ.